Ayush Department Karnataka Recruitment 2023: ಆಯುಷ್ ಇಲಾಖೆ ನೇಮಕಾತಿ 2023

ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿ ಜಿಲ್ಲೆಯಲ್ಲಿ ಖಾಲಿ ಇರುವ (Ayush Department Karnataka Recruitment 2023) ವಿವಿಧ ಹುದ್ದೆಗಳ ಭರ್ತಿಗೆ ಅರ್ಹ ಹಾಗೂ ಆಸಕ್ತ ಅಭ್ಯರ್ಥಿಗಳಿಂದ ಅರ್ಜಿ ಕರೆಯಲಾಗಿದೆ. ಆಯುಷ್ ಇಲಾಖೆಯಲ್ಲಿ ಮತ್ತು ಯಾದಗಿರಿ ಜಿಲ್ಲೆಯಲ್ಲಿ ಕೆಲಸ ಮಾಡಲು ಆಸಕ್ತಿ ಹೊಂದಿರುವವರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಥಿ ವೇತನ, ಉದ್ಯೋಗ ಸುದ್ದಿ ಸೇರಿದಂತೆ ಇತರ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಸೇರಿಕೊಳ್ಳಿ. ಈ ಸ್ಕಾಲರ್‌ಶಿಪ್‌ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದ್ದು, ಕೊನೆಯವರೆಗೆ ಓದಿರಿ. ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.

ಇದನ್ನು ಓದಿ: IRCON Recruitment 2023: ರೈಲ್ವೆ ಇಲಾಖೆಯಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಉದ್ಯೋಗ ಮಾಹಿತಿ

ತಜ್ಞ ವೈದ್ಯರು ಯುನಾನಿ3
ತಜ್ಞ ವೈದ್ಯರು ಆಯುರ್ವೇದ2
ಔಷಧ ವಿತರಕರು2
ಮಸಾಜಿಸ್ಟ್ (ಮಹಿಳಾ)3
ಕ್ಷಾರಸೂತ್ರ ಅಟೆಂಡರ್1
ಮಲ್ಟಿಪರ್ಪಸ್ ವರ್ಕರ್2

ವಿದ್ಯಾರ್ಹತೆ

ರಾಷ್ಟ್ರೀಯ ಆಯುಷ್ ಅಭಿಯಾನದಡಿ ಯಾದಗಿರಿಯಲ್ಲಿ ಕರೆಯಲಾದ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಧಿಸೂಚನೆಯ ಪ್ರಕಾರ, ಮಸಾಜಿಸ್ಟ್ ಹುದ್ದೆಗೆ ಕನಿಷ್ಠ 7ನೇ ತರಗತಿ, ಮಲ್ಟಿಪರ್ಪಸ್ ವರ್ಕರ್ ಹುದ್ದೆಗೆ ಕನಿಷ್ಠ 10ನೇ ತರಗತಿ, ಕ್ಷಾರಸೂತ್ರ ಅಟೆಂಡರ್ ಹುದ್ದೆಗೆ ಕನಿಷ್ಠ 10ನೇ ತರಗತಿ, ಔಷಧ ವಿತರಕರು ಹುದ್ದೆಗೆ 10ನೇ ತರಗತಿ ಮತ್ತು ಡಿಪ್ಲೊಮಾ ಇನ್ ಫಾರ್ಮಸಿ ಜೊತೆಗೆ ನೋಂದಣಿ ಮಾಡಿಕೊಂಡಿರಬೇಕು.

ತಜ್ಞ ವೈದ್ಯರು ಆಯುರ್ವೇದ ಹುದ್ದೆಗೆ ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಪಂಚಕರ್ಮ/ಶಲ್ಯತಂತ್ರ/ ಕಾಯಚಿಕಿತ್ಸಾ ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.
ತಜ್ಞ ವೈದ್ಯರು ಯುನಾನಿ ಹುದ್ದೆಗೆ ಆಯುರ್ವೇದ ವೈದ್ಯಕೀಯ/ ಯುನಾನಿ ವೈದ್ಯಕೀಯ ಪದವಿ ಮತ್ತು ಸ್ನಾತಕೋತ್ತರ ಪದವಿ ಜೊತೆಗೆ ವೈದ್ಯ ವೃತ್ತಿ ನೋಂದಣಿ ಮಾಡಿಕೊಂಡಿರಬೇಕು.

ವಯೋಮಿತಿ

Ayush Department Karnataka Recruitment 2023 ರ ನೇಮಕಾತಿ ಅಧಿಸೂಚನೆ ಪ್ರಕಾರ ಅರ್ಜಿಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಹಾಗೂ ಗರಿಷ್ಠ 35 ವರ್ಷ ವಯೋಮಿತಿಯನ್ನು ನಿಗದಿಪಡಿಸಲಾಗಿದೆ, ಮೀಸಲಾತಿಯಲ್ಲಿ ಬರುವ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

ಅರ್ಜಿ ಶುಲ್ಕ

ರಾಷ್ಟ್ರೀಯ ಆಯುಷ್ ಇಲಾಖೆಯ, ಯಾದಗಿರಿ ಜಿಲ್ಲೆಯ ನೇಮಕಾತಿ ಅಧಿಸೂಚನೆಯಂತೆ ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ಅರ್ಜಿ ಶುಲ್ಕ ಇರುವುದಿಲ್ಲ.

ವೇತನಶ್ರೇಣಿ

Ayush Department Karnataka Recruitment 2023 ರ ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂಪಾಯಿ 16,900 ದಿಂದ 52,550/- ರೂಪಾಯಿ ನಿಗದಿಪಡಿಸಲಾಗಿದೆ. ಆಯಾ ವೃತ್ತಿಗಳಿಗೆ ಸಂಬಂಧಿಸಿದಂತೆ ನೀಡಲಾಗುವ ವೇತನದ ಮಾಹಿತಿ ಈ ಕೆಳಗಿನಂತಿರುತ್ತದೆ.

ತಜ್ಞ ವೈದ್ಯರು ಯುನಾನಿರೂ. 52,550/- ದಿಂದ 57,550/-
ತಜ್ಞ ವೈದ್ಯರು ಆಯುರ್ವೇದರೂ. 52,550/- ದಿಂದ 57,550/-
ಔಷಧ ವಿತರಕರುರೂ. 27,550/-
ಮಸಾಜಿಸ್ಟ್ (ಮಹಿಳಾ)ರೂ. 18,500/-
ಕ್ಷಾರಸೂತ್ರ ಅಟೆಂಡರ್ರೂ. 18,500/-
ಮಲ್ಟಿಪರ್ಪಸ್ ವರ್ಕರ್ರೂ. 16,900/-

ಆಯ್ಕೆ ವಿಧಾನ

ಮಸಾಜಿಸ್ಟ್ ಮತ್ತು ಕ್ಷಾರಸೂತ್ರ ಅಟೆಂಡೆಂಟ್ ಹುದ್ದೆಗಳಿಗೆ ಪ್ರಾಯೋಗಿಕವಾಗಿ (ಪ್ರಾಕ್ಟಿಕಲ್) ಪರೀಕ್ಷೆ ಮೂಲಕ ಆಯ್ಕೆ ಮಾಡಲಾಗುವುದು. ತಜ್ಞ ವೈದ್ಯರು ಮತ್ತು ಇತರೆ ಹುದ್ದೆಗಳಿಗೆ ನಿಗದಿಪಡಿಸಲಾದ ಶೈಕ್ಷಣಿಕ ಅರ್ಹತೆಯಲ್ಲಿ ಪಡೆದ ಅಂಕಗಳು, ಸಂದರ್ಶನ ಮತ್ತು ಅನುಭವದ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

Ayush Department Karnataka Recruitment 2023 ರ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ?

  • ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸುವ ಮೊದಲು ಇಲಾಖೆ ಹೊರಡಿಸಿರುವ ಅಧಿಸೂಚನೆಯನ್ನು ಗಮನವಿಟ್ಟು ಓದಿ ಅರ್ಜಿ ಸಲ್ಲಿಸಲು ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು ನಂತರ ಅರ್ಜಿಯನ್ನು ಸಲ್ಲಿಸಬೇಕು.
  • ಇಲಾಖೆಯ ವೆಬ್‌ಸೈಟ್ ಗೆ ಭೇಟಿ ನೀಡಿ ಅಥವಾ ಈ ಕೆಳಗಡೆ ನೀಡಲಾದ ಅಪ್ಲೈ ಆನ್‌ಲೈನ್‌ ಲಿಂಕ್ ಮೇಲೆ ಕ್ಲಿಕ್ ಮಾಡಿ ಅಪ್ಲಿಕೇಷನ್ ತೆರೆದುಕೊಳ್ಳಿ.
  • ಅಪ್ಲಿಕೇಷನ್ ನಲ್ಲಿ ತಿಳಿಸಿರುವಂತಹ ಎಲ್ಲಾ ಮಾಹಿತಿಯನ್ನು (ಉದಾಹರಣೆಗೆ ಅಭ್ಯರ್ಥಿಯ ಹೆಸರು, ವಿಳಾಸ, ವಿದ್ಯಾರ್ಹತೆ, ಮೊಬೈಲ್ ಸಂಖ್ಯೆ ಇತ್ಯಾದಿ) ಭರ್ತಿ ಮಾಡಿ, ಮುಂದಿನ ಹಂತಕ್ಕೆ ತೆರಳುವ ಮುನ್ನ ಪುನಃ ಒಮ್ಮೆ ಪರಿಶೀಲಿಸಿ.
  • ಕೊನೆಯದಾಗಿ, ಅಪ್ಲಿಕೇಷನ್ ನಲ್ಲಿ ಯಾವುದೇ ಪ್ರಮಾಣ ಪತ್ರ/ ದಾಖಲೆಗಳನ್ನು ಅಪ್ಲೋಡ್ ಮಾಡಲು ಸೂಚಿಸಿದ್ದರೆ, ಅವುಗಳನ್ನು ಸ್ಕ್ಯಾನ್ ಮಾಡಿ ಅಪ್ಲೋಡ್ ಮಾಡಿ (ಅಗತ್ಯವಿದ್ದರೆ ಮಾತ್ರ) ಅರ್ಜಿ ಸಲ್ಲಿಕೆ ಪೂರ್ಣಗೊಳಿಸಿ.
  • ಅರ್ಜಿ ಸಲ್ಲಿಸಿದ ದಾಖಲೆಗಾಗಿ ನಿಮ್ಮ ಪ್ರತಿಯನ್ನು ತೆಗೆದುಕೊಳ್ಳಿ.

ಇದನ್ನು ಓದಿ: Labour Card Scholarship 2023 Apply Online: ರೂ 20000 ಸ್ಕಾಲರ್ಶಿಪ್ ಗಾಗಿ ಈಗಲೇ ಅರ್ಜಿ ಸಲ್ಲಿಸಿ

Ayush Department Karnataka Recruitment 2023 ರ ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ : 04 ನವೆಂಬರ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 24 ನವೆಂಬರ್ 2023

ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅರ್ಜಿ ಸಲ್ಲಿಕೆ ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಚಾನೆಲ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಚಾನೆಲ್ಇಲ್ಲಿ ಕ್ಲಿಕ್ ಮಾಡಿ
Sharing Is Caring: