ಭಾರತೀಯ ವಿಜ್ಞಾನ ಸಂಸ್ಥೆ (Indian Institute of Science) ಯಲ್ಲಿ ಖಾಲಿಯಿರುವ ಆಫೀಸರ್-ಫೈನಾನ್ಸ್ & ಅಕೌಂಟ್ಸ್ ಹುದ್ದೆಗಳನ್ನು ಭರ್ತಿ ಮಾಡಲು(IISc Recruitment 2022) ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಬಿ.ಕಾಂ, ಎಂಬಿಎ ಪೂರ್ಣಗೊಳಿಸಿ ಹುದ್ದೆಗಳಿಗಾಗಿ ಹುಡುಕುತ್ತಿರುವ ಅಭ್ಯರ್ಥಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದಾಗಿದೆ. ಬೆಂಗಳೂರಿನಲ್ಲಿ ಕೆಲಸಮಾಡಲು ಬಯಸುವವರು ಡಿಸೆಂಬರ್ 30, 2022 ರ ಒಳಗೆ ಅರ್ಜಿ ಸಲ್ಲಿಸಲು ಕೋರಲಾಗಿದೆ.
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಉದ್ಯೋಗ ಮಾಡಲು ಆಸಕ್ತಿಯುಳ್ಳ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಇಲ್ಲಿ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಹೆಚ್ಚಿನ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ.
ಉದ್ಯೋಗ ಸಂಸ್ಥೆ | ಭಾರತೀಯ ವಿಜ್ಞಾನ ಸಂಸ್ಥೆ |
ಹುದ್ದೆಯ ವಿವರ | ಆಫೀಸರ್-ಫೈನಾನ್ಸ್ & ಅಕೌಂಟ್ಸ್ |
ಹುದ್ದೆಯ ಸಂಖ್ಯೆ | ನಿರ್ದಿಷ್ಟಪಡಿಸಲಾಗಿಲ್ಲ |
ವಿದ್ಯಾರ್ಹತೆ | ಬಿ.ಕಾಂ, ಎಂಬಿಎ |
ವೇತನ | IISc ನಿಯಮಾನುಸಾರ |
ಉದ್ಯೋಗದ ಸ್ಥಳ | ಬೆಂಗಳೂರು |
ವಿದ್ಯಾರ್ಹತೆ
ಭಾರತೀಯ ವಿಜ್ಞಾನ ಸಂಸ್ಥೆ ನೇಮಕಾತಿ ಅಧಿಸೂಚನೆ ಪ್ರಕಾರ, ಹುದ್ದೆಗಳಿಗೆ ಅರ್ಜಿ ಸಲ್ಲಿಸಬಯಸುವ ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಶೈಕ್ಷಣಿಕ ಮಂಡಳಿಯಿಂದ ಕಡ್ಡಾಯವಾಗಿ ಬಿ.ಕಾಂ, ಎಂಬಿಎ ಪದವಿಯನ್ನು ಪೂರ್ಣಗೊಳಿಸಿರಬೇಕಿದೆ.
ವಯೋಮಿತಿ
ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿಯಿರುವ ಆಫೀಸರ್-ಫೈನಾನ್ಸ್ & ಅಕೌಂಟ್ಸ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಜನವರಿ 1, 1985 ರ ನಂತರ ಜನಿಸಿರಬೇಕು ಎಂದು ಹೇಳಲಾಗಿದೆ. ಇಂಡಿಯನ್ ಇನ್‌ಸ್ಟಿಟ್ಯೂಟ್ ಆಫ್ ಸೈನ್ಸ್ ನಿಯಮಗಳ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆ ಇರಲಿದೆ.
ಆಯ್ಕೆ ಪ್ರಕ್ರಿಯೆ
ಭಾರತೀಯ ವಿಜ್ಞಾನ ಸಂಸ್ಥೆಯ ನೇಮಕಾತಿಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಮೊದಲಿಗೆ ಲಿಖಿತ ಪರೀಕ್ಷೆ ನಡೆಸಲಾಗುತ್ತದೆ. ನಂತರ ಸಂದರ್ಶನದ ಮೂಲಕ ಆಯ್ಕೆಯನ್ನು ಮಾಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಇದನ್ನೂ ಓದಿರಿ: Union Bank Recruitment 2022: ಯೂನಿಯನ್ ಬ್ಯಾಂಕ್ನಲ್ಲಿ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ
ಭಾರತೀಯ ವಿಜ್ಞಾನ ಸಂಸ್ಥೆಯ (IISc Recruitment 2022) ಉದ್ಯೋಗಗಳಿಗೆ ಅರ್ಜಿ ಸಲ್ಲಿಸುವುದು ಹೇಗೆ ?
- IISc Recruitment 2022 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ. ಹುದ್ದೆಗೆ ಅರ್ಜಿ ಸಲ್ಲಿಸಲು ನೀಡಲಾದ ಮಾನದಂಡಗಳು ನೀವು ಹೊಂದಿರುವಿರೆ ಎಂದು ಪರಿಶೀಲಿಸಿಕೊಳ್ಳಿ.
- ನಂತರ ಅಲ್ಲಿ ಕೇಳಲಾದ ಸ್ವವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಕೆಲಸದ ಅನುಭವವಿದ್ದರೆ ದಾಖಲೆಗಳು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಪಿಡಿಎಫ್ ವಿಧಾನದಲ್ಲಿ ಸಿದ್ಧಪಡಿಸಿಕೊಳ್ಳಿ.
- ನಂತರ ತಮ್ಮ ಅರ್ಜಿಯನ್ನು ನಿಗದಿತ ನಮೂನೆಯಲ್ಲಿ ಇ-ಮೇಲ್ ಐಡಿ office.sid@iisc.ac.in ಗೆ ಡಿಸೆಂಬರ್ 30 ರೊಳಗೆ ಸಲ್ಲಿಸಿ.
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭದ ದಿನಾಂಕ: 08/12/2022
ಅರ್ಜಿ ಸಲ್ಲಿಸಲು ಕೊನೆ ದಿನಾಂಕ: 30/12/2022
ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ: ಕ್ಲಿಕ್ ಮಾಡಿ
ಅಧಿಕೃತ ವೆಬ್ ಸೈಟ್: ಕ್ಲಿಕ್ ಮಾಡಿ