Indian Navy Recruitment 2022: 10th, PUC ಪಾಸಾಗಿದ್ರೆ ಭಾರತೀಯ ನೌಕಾಪಡೆಯಲ್ಲಿದೆ ಉದ್ಯೋಗ

ಭಾರತೀಯ ನೌಕಾಪಡೆ (Indian Navy Recruitment) ಖಾಲಿ ಇರುವ 1500 ಅಗ್ನಿವೀರ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಿದೆ. ಕೇಂದ್ರ ಸರಕಾರದ ಉದ್ಯೋಗ ಮತ್ತು ಭಾರತೀಯ ನೌಕಾಪಡೆಯಲ್ಲಿ ಕೆಲಸ ಮಾಡುವ ಆಸಕ್ತಿ ಉಳ್ಳವರು ಅರ್ಜಿಯನ್ನು ಸಲ್ಲಿಸಬಹುದು.

ಅರ್ಜಿ ಸಲ್ಲಿಸಲು ಅಗತ್ಯವಿರುವ ಹುದ್ದೆಯ ಕುರಿತಾಗಿ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಇಲ್ಲಿ ಮಾಹಿತಿಯನ್ನು ನೀಡಲಾಗಿದೆ ಮುಂದೆ ಓದಿ..

ಹುದ್ದೆಯ ಮಾಹಿತಿ

ಅಗ್ನಿವೀರ್ SSR – 1400
ಅಗ್ನಿವೀರ್ MR – 100

ವಿದ್ಯಾರ್ಹತೆ

SSR – ಅಭ್ಯರ್ಥಿಯು ಗಣಿತ ಮತ್ತು ಭೌತಶಾಸ್ತ್ರದೊಂದಿಗೆ ಪಿಯುಸಿ ಉತ್ತೀರ್ಣರಾಗಿರಬೇಕು ಮತ್ತು ಕನಿಷ್ಠ ರಸಾಯನಶಾಸ್ತ್ರ / ಜೀವಶಾಸ್ತ್ರ / ಕಂಪ್ಯೂಟರ್ ಸೈನ್ಸ್‌ನಲ್ಲಿ ಮಾನ್ಯತೆ ಪಡೆದ ಶಿಕ್ಷಣ ಮಂಡಳಿಗಳಿಂದ ಉತ್ತೀರ್ಣರಾಗಿರಬೇಕು.

MR – ಅಭ್ಯರ್ಥಿಯು ಮಾನ್ಯತೆ ಪಡೆದ ಶಾಲಾ ಶಿಕ್ಷಣ ಮಂಡಳಿಗಳಿಂದ 10 ನೇ ತರಗತಿ ಉತ್ತೀರ್ಣರಾಗಿರಬೇಕು.

ವಯೋಮಿತಿ

ಭಾರತೀಯ ನೌಕಾಪಡೆಯಲ್ಲಿ ಸೇವೆ ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು 01 ಮೇ 2002 ರಿಂದ 31 ಅಕ್ಟೋಬರ್ 2005 ರ ಒಳಗೆ ಜನಿಸಿರಬೇಕು. ನಿಯಮಾವಳಿಯ ಪ್ರಕಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ಇರುವುದು.

ಅರ್ಜಿ ಶುಲ್ಕ

ನೌಕಾಪಡೆಯ ಅಗ್ನಿವೀರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು ಪರೀಕ್ಷಾ ಶುಲ್ಕ 550 ರೂಪಾಯಿಯನ್ನು ಆನ್ ಲೈನ್ ಮೂಲಕ ಪಾವತಿಸಬೇಕು.

ಆಯ್ಕೆ ವಿಧಾನ

ಭಾರತೀಯ ನೌಕಾಪಡೆಯ ಅಗ್ನಿವೀರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದವರನ್ನು ದೈಹಿಕ ಸಾಮರ್ಥ್ಯ ಪರೀಕ್ಷೆ ಮತ್ತು ವೈದ್ಯಕೀಯ ಪರೀಕ್ಷೆಗಳಿಗೆ ಒಡ್ಡಲಾಗುತ್ತದೆ. ನಂತರ ಲಿಖಿತ ಪರೀಕ್ಷೆ ಮತ್ತು ನೇರ ಸಂದರ್ಶದ ಮೂಲಕ ಆಯ್ಕೆ ಮಾಡಲಾಗುತ್ತದೆ.

ವೇತನ ಶ್ರೇಣಿ

ಭಾರತೀಯ ನೌಕಾಪಡೆಯ ಅಗ್ನಿವೀರ್ ಹುದ್ದೆಗೆ ಆಯ್ಕೆಯಾದ ಉದ್ಯೋಗಿಗಳಿಗೆ 30,000/- ವೇತನ ನೀಡಲಾಗುವುದು.

ಇದನ್ನೂ ಓದಿರಿ: Union Bank Recruitment 2022: ಯೂನಿಯನ್​ ಬ್ಯಾಂಕ್​ನಲ್ಲಿ 33 ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

Indian Navy Recruitment 2022 ಗೆ ಅರ್ಜಿಯನ್ನು ಸಲ್ಲಿಸಲು ಬೇಕಾದ ಮುಖ್ಯ ದಾಖಲೆಗಳು

  • ಆಧಾರ್ ಕಾರ್ಡ್ / ಪಾಸ್ಪೋರ್ಟ್ / ವೋಟರ್ ಐಡಿ / ಪಾನ್ ಕಾರ್ಡ್
  • ಜನ್ಮ ದಿನಾಂಕ ಪುರಾವೆ ,
  • 10 ನೇ ತರಗತಿಯ ಅಂಕಪಟ್ಟಿ,
  • 12 ನೇ ತರಗತಿಯ ಅಂಕಪಟ್ಟಿ,
  • ಇತ್ತೀಚಿನ ಪಾಸ್ಪೋರ್ಟ್ ಗಾತ್ರದ ಬಣ್ಣದ ಛಾಯಾಚಿತ್ರ.

ಭಾರತೀಯ ನೌಕಾಪಡೆಯ ಅಗ್ನಿವೀರ್ SSR/MR ನೇಮಕಾತಿ 2022ಕ್ಕೆ ಅರ್ಜಿ ಸಲ್ಲಿಸುವುದು ಹೇಗೆ ?

  • ಭಾರತೀಯ ನೌಕಾಪಡೆಯ ವೆಬ್‌ಸೈಟ್‌ಗೆ ಹೋಗಿ – joinindiannavy.gov.in
  • ‘Register’ ಟ್ಯಾಬ್ ಅನ್ನು ಕ್ಲಿಕ್ ಮಾಡುವ ಮೂಲಕ ನಿಮ್ಮ ಇಮೇಲ್ ಐಡಿಯೊಂದಿಗೆ ನಿಮ್ಮನ್ನು ನೋಂದಾಯಿಸಿಕೊಳ್ಳಿ.
  • ನೋಂದಾಯಿತ ಇಮೇಲ್ ಐಡಿಯೊಂದಿಗೆ ‘Log–in’ ಮಾಡಿ ಮತ್ತು “Current Opportunities” ಕ್ಲಿಕ್ ಮಾಡಿ.
  • “Apply” ಬಟನ್ ಮೇಲೆ ಕ್ಲಿಕ್ ಮಾಡಿ.
  • ಫಾರ್ಮ್ ಅನ್ನು ಸಂಪೂರ್ಣವಾಗಿ ಭರ್ತಿ ಮಾಡಿ.
  • ಡಾಕ್ಯುಮೆಂಟ್‌ಗಳನ್ನು ಅಪ್‌ಲೋಡ್ ಮಾಡಿ.
  • ಎಲ್ಲಾ ವಿವರಗಳು ಸರಿಯಾಗಿವೆಯೇ ಎಂಬುದನ್ನು ಖಚಿತಪಡಿಸಿಕೊಳ್ಳಿ ಮತ್ತು ಅಗತ್ಯವಿರುವ ಎಲ್ಲಾ ದಾಖಲೆಗಳನ್ನು ಅಪ್‌ಲೋಡ್ ಮಾಡಲಾಗಿದೆಯೇ ಪರೀಕ್ಷಿಸಿಕೊಳ್ಳಿ. ನಂತರ ‘Submit‘ ಬಟನ್ ಮೇಲೆ ಕ್ಲಿಕ್ ಮಾಡಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 08/12/2022
ಅರ್ಜಿ ಸಲ್ಲಿಸಲು ಕೊನೆ ದಿನ: 17/12/2022

ಪ್ರಮುಖ ಲಿಂಕುಗಳು

ಅಧಿಕೃತ ನೋಟಿಫಿಕೇಶನ್ ಓದಿ : ಇಲ್ಲಿ ಕ್ಲಿಕ್ ಮಾಡಿ
ವೆಬಸೈಟ್ : joinindiannavy.gov.in

Sharing Is Caring: