ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ವೈದ್ಯಕೀಯ(KAPL Recruitment 2023) ಸಲಹೆಗಾರರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಿದ್ದು, ಬೆಂಗಳೂರು – ಕರ್ನಾಟಕ ಸರ್ಕಾರದಲ್ಲಿ ವೃತ್ತಿಯನ್ನು ಹುಡುಕುತ್ತಿರುವ ಉದ್ಯೋಗಾಕಾಂಕ್ಷಿಗಳು ಈ ಅವಕಾಶವನ್ನು ಬಳಸಿಕೊಳ್ಳಬಹುದು.
KAPL ನಲ್ಲಿ 1 ಮೆಡಿಕಲ್ ಅಡ್ವೈಸರ್ ಹುದ್ದೆಯು ಖಾಲಿಯಿದ್ದು, ಈ ಹುದ್ದೆಗೆ ಭರ್ತಿ ಮಾಡಿಕೊಳ್ಳಲು ಅಧಿಸೂಚನೆಯನ್ನು ಹೊರಡಿಸಲಾಗಿದೆ. ಈ ಹುದ್ದೆಗೆ ಆಸಕ್ತ ಅಭ್ಯರ್ಥಿಗಳು ನವೆಂಬರ್ 24, 2023 ರೊಳಗೆ ಆಫ್ಲೈನ್ ಮೂಲಕ ಅರ್ಜಿ ಸಲ್ಲಿಸಬೇಕೆಂದು ತಿಳಿಸಲಾಗಿದೆ.
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ವಿದ್ಯಾರ್ಥಿ ವೇತನ, ಉದ್ಯೋಗ ಸುದ್ದಿ ಸೇರಿದಂತೆ ಇತರ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಸೇರಿಕೊಳ್ಳಿ. ಈ ಸ್ಕಾಲರ್‌ಶಿಪ್ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದ್ದು, ಕೊನೆಯವರೆಗೆ ಓದಿರಿ. ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.
ಇದನ್ನು ಓದಿ: India Post Recruitment 2023: ಅಂಚೆ ಇಲಾಖೆಯಲ್ಲಿ 1899 ಹುದ್ದೆಗಳಿಗೆ ಅರ್ಜಿ ಅಹ್ವಾನ
ಉದ್ಯೋಗ ಮಾಹಿತಿ
ಉದ್ಯೋಗ ನೀಡುವ ಸಂಸ್ಥೆ | ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ |
ಹುದ್ದೆ | ಮೆಡಿಕಲ್ ಅಡ್ವೈಸರ್ |
ಒಟ್ಟು ಹುದ್ದೆ | 1 |
ವೇತನ | ಮಾಸಿಕ ರೂ. 1,50,000 |
ಉದ್ಯೋಗದ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನ | 24 ನವೆಂಬರ್ 2023 |
ವಿದ್ಯಾರ್ಹತೆ
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಫಾರ್ಮಕಾಲಜಿಯಲ್ಲಿ ಎಂಬಿಬಿಎಸ್, ಎಂ.ಡಿ ಪೂರ್ಣಗೊಳಿಸಿರಬೇಕು.
ವಯೋಮಿತಿ
KAPL Recruitment 2023 ರ ಅಧಿಸೂಚನೆ ಪ್ರಕಾರ, ಅಭ್ಯರ್ಥಿಗಳ ವಯಸ್ಸು ಗರಿಷ್ಠ 65 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ವೇತನಶ್ರೇಣಿ
ಕರ್ನಾಟಕ ಆ್ಯಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, ವೈದ್ಯಕೀಯ ಸಲಹೆಗಾರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗೆ ಮಾಸಿಕ ರೂಪಾಯಿ 1,50,000 ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.
ಆಯ್ಕೆ ವಿಧಾನ
ಈ ಹುದ್ದೆಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಲಿಖಿತ ಪರೀಕ್ಷೆ ಸಡೆಸಲಾಗುವುದು ಮತ್ತು ನೇರ ಸಂದರ್ಶನ ನಡೆಸಿ ಆಯ್ಕೆ ಮಾಡಿಕೊಳ್ಳಲಗುವುದು.
KAPL Recruitment 2023 ರ ಹುದ್ದೆಗೆ ಅರ್ಜಿ ಸಲ್ಲಿಸುವುದು ಹೇಗೆ ?
ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ನಿಗದಿತ ಅರ್ಜಿ ನಮೂನೆಯ ಮೂಲಕ ಆಫ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ. ಅರ್ಜಿದಾರರು ಅರ್ಜಿ ನಮೂನೆಯನ್ನು ಸಂಬಂಧಿತ ಸ್ವಯಂ-ದೃಢೀಕರಿಸಿದ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ನೇರವಾಗಿ ಸಲ್ಲಿಸಲು ತಿಳಿಸಲಾಗಿದೆ.
ಡೆಪ್ಯುಟಿ ಜನರಲ್ ಮ್ಯಾನೇಜರ್ – HRD
ಕರ್ನಾಟಕ ಆಂಟಿಬಯೋಟಿಕ್ಸ್ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್
KAPL ಹೌಸ್
ಅರ್ಕಾ ದಿ ಬಿಸಿನೆಸ್ ಸೆಂಟರ್
ಪ್ಲಾಟ್ ನಂ. 37
ಸೈಟ್ ನಂ. 34/4
NTTF ಮುಖ್ಯ ರಸ್ತೆ
2 ನೇ ಹಂತ
ಪೀಣ್ಯ
ಬೆಂಗಳೂರು
ಕರ್ನಾಟಕ-560058
ಇದನ್ನು ಓದಿ: Ayush Department Karnataka Recruitment 2023: ಆಯುಷ್ ಇಲಾಖೆ ನೇಮಕಾತಿ 2023
KAPL Recruitment 2023 ರ ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 11 ನವೆಂಬರ್ 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 24 ನವೆಂಬರ್ 2023
ಪ್ರಮುಖ ಲಿಂಕುಗಳು
ಅಧಿಕೃತ ಅಧಿಸೂಚನೆ | ಇಲ್ಲಿ ಕ್ಲಿಕ್ ಮಾಡಿ |
ಅರ್ಜಿ ನಮೂನೆ | ಇಲ್ಲಿ ಕ್ಲಿಕ್ ಮಾಡಿ |
ಅಧಿಕೃತ ವೆಬ್ಸೈಟ್ | ಇಲ್ಲಿ ಕ್ಲಿಕ್ ಮಾಡಿ |
ವಾಟ್ಸಪ್ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |
ಟೆಲಿಗ್ರಾಂ ಚಾನೆಲ್ | ಇಲ್ಲಿ ಕ್ಲಿಕ್ ಮಾಡಿ |