KAPL Recruitment 2023: ಜೂನಿಯರ್ ಎಕ್ಸಿಕ್ಯೂಟಿವ್, ಕ್ವಾಲಿಟಿ ಅಶ್ಯೂರೆನ್ಸ್​ ಹುದ್ದೆಗಳು ಖಾಲಿಯಿವೆ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್​​ನಲ್ಲಿ (KAPL Recruitment 2023) ಅನೇಕ ಹುದ್ದೆಗಳು ಖಾಲಿ ಇದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿ ಪೋಸ್ಟಿಂಗ್ ಮಾಡಲಾಗುವುದು ಎಂದು ಜಾಹಿರಾತಿನಲ್ಲಿ ತಿಳಿಸಲಾಗಿದ್ದು, ಬೆಂಗಳೂರಿನಲ್ಲಿ ಕೆಲಸಮಾಡಲು ಆಸಕ್ತಿಯಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ​​(Karnataka Antibiotics and Pharmaceuticals Limited) ನಲ್ಲಿ ಒಟ್ಟು 1 ಜೂನಿಯರ್ ಎಕ್ಸಿಕ್ಯೂಟಿವ್ ಹಾಗೂ ಕ್ವಾಲಿಟಿ ಅಶ್ಯೂರೆನ್ಸ್​ ಹುದ್ದೆ ಖಾಲಿ ಇರುವುದಾಗಿ ಅಧಿಸೂಚನೆ ಹೊರಡಿಸಲಾಗಿದೆ. ಅರ್ಹ ಅಭ್ಯರ್ಥಿಗಳು KAPL ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮೇ 22 ಕೊನೆಯ ದಿನವಾಗಿದೆ.

ರಾಜ್ಯ ಸರಕಾರದ ಹಾಗೂ ಬೆಂಗಳೂರಿನಲ್ಲಿ ಉದ್ಯೋಗಕ್ಕಾಗಿ ಕಾಯುತ್ತಿರುವವರು ಅರ್ಜಿಯನ್ನು ಸಲ್ಲಿಸಲು ಉತ್ತಮ ಅವಕಾಶವಾಗಿದೆ. ಈ ಉದ್ಯೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಗಳನ್ನು ತಿಳಿದುಕೊಳ್ಳಲು ಮುಂದೆ ಓದಿ.

ವಿದ್ಯಾರ್ಹತೆ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ (KAPL Recruitment 2023) ನಲ್ಲಿ ಉದ್ಯೋಗ ಪಡೆಯಲು ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಕಡ್ಡಾಯವಾಗಿ ಆರ್ಗ್ಯಾನಿಕ್ ಕೆಮಿಸ್ಟ್ರಿಯಲ್ಲಿ ಎಂ. ಎಸ್ಸಿ ಪೂರ್ಣಗೊಳಿಸಿರುವುದು ಅವಶ್ಯವಾಗಿದೆ.

ವಯೋಮಿತಿ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನ ನೇಮಕಾತಿ ಅಧಿಸೂಚನೆಯ ಪ್ರಕಾರ ಉದ್ಯೋಗಕ್ಕೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳಿಗೆ 30 ವರ್ಷಗಳು ಮೀರಿರಬಾರದು ಎಂದು ಹೇಳಲಾಗುದೆ.

ಆಯ್ಕೆ ಪ್ರಕ್ರಿಯೆ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನ ಹುದ್ದೆಗಳಿಗೆ ಆಯ್ಕೆ ಮಾಡುವಾಗ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆಯಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.

ವೇತನ

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನ ಪ್ರಕಾರ ಉದ್ಯೋಗಕ್ಕೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕವಾಗಿ ರೂಪಾಯಿ 44,469/- ನೀಡಲಾಗುವುದು ಎಂದು ಅಧಿಸೂಚನೆಯಲ್ಲಿ ತಿಳಿಸಿಲಾಗಿದೆ.

ಅನುಭವ

KAPL ನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹೆಸರಾಂತ ಫಾರ್ಮಾಸ್ಯುಟಿಕಲ್ ಇಂಡಸ್ಟ್ರಿಯಲ್ಲಿ ಕನಿಷ್ಠ 2 ವರ್ಷ ಕೆಲಸ ಮಾಡಿದ ಅನುಭವವನ್ನು ಹೊಂದಿರಬೇಕು.

ಕರ್ನಾಟಕ ಆ್ಯಂಟಿಬಯೋಟಿಕ್ಸ್​ ಮತ್ತು ಫಾರ್ಮಾಸ್ಯುಟಿಕಲ್ಸ್ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳ (KAPL Recruitment 2023) ಭರ್ತಿಗೆ ಅರ್ಜಿ ಸಲ್ಲಿಸುವುದು ಹೇಗೆ ?

  • KAPL Recruitment 2023 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ. ಹುದ್ದೆಗೆ ಅರ್ಜಿ ಸಲ್ಲಿಸಲು ನೀಡಲಾದ ಮಾನದಂಡಗಳು ನೀವು ಹೊಂದಿರುವಿರೆ ಎಂದು ಪರಿಶೀಲಿಸಿಕೊಳ್ಳಿ.
  • ನಂತರ ಅಲ್ಲಿ ಕೇಳಲಾದ ಸ್ವವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಕೆಲಸದ ಅನುಭವವಿದ್ದರೆ ದಾಖಲೆಗಳು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳಿ.
  • ನಂತರ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ. ಅಲ್ಲದೇ ಮತ್ತೊಮ್ಮೆ ನೀವು ನೀಡಿರುವ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಿ.
  • ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
  • ಡೆಪ್ಯುಟಿ ಜನರಲ್ ಮ್ಯಾನೇಜರ್ – HRD KAPL ಹೌಸ್ ಪ್ಲಾಟ್ ನಂ. 37 ARKA ದಿ ಬಿಸಿನೆಸ್ ಸೆಂಟರ್ 2 ನೇ ಹಂತ ಪೀಣ್ಯ ಇಂಡಸ್ಟ್ರಿಯಲ್ ಏರಿಯಾ ಬೆಂಗಳೂರು – 560058.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭದ ದಿನಾಂಕ: ಮೇ 9, 2023

ಅರ್ಜಿ ಸಲ್ಲಿಸಲು ಕೊನೆಯ ದಿನ: ಮೇ 22, 2023

ಪ್ರಮುಖ ಲಿಂಕುಗಳು

ಅಧಿಕೃತ ವೆಬ್ ಸೈಟ್: kaplindia.com

KAPL Recruitment 2023 ರ ಅಧಿಸೂಚನೆ ಓದಲು ಕ್ಲಿಕ್ ಮಾಡಿ

ಅರ್ಜಿಯನ್ನು ಸಲ್ಲಿಸಲು ಅರ್ಜಿ ನಮೂನೆಯನ್ನು ಪಡೆಯಿರಿ – ಕ್ಲಿಕ್ ಮಾಡಿ

Sharing Is Caring: