Karnataka Bank Recruitment: ಕರ್ಣಾಟಕ ಬ್ಯಾಂಕ್ ನಲ್ಲಿ ಹುದ್ದೆಗಳ ಬೃಹತ್ ನೇಮಕಾತಿ

ಖಾಸಗಿ ವಲಯದ ಕರ್ಣಾಟಕ ಬ್ಯಾಂಕಿನಲ್ಲಿ ಖಾಲಿಯಿರುವ (Karnataka Bank Recruitment) ಕಾರ್ಯದರ್ಶಿ ಹುದ್ದೆಗೆ ನೇಮಕಾತಿ ಅರ್ಜಿಯನ್ನು ಆಹ್ವಾನಿಸಲಾಗಿದೆ. ಕರ್ನಾಟಕ ಬ್ಯಾಂಕಿನಲ್ಲಿ ಉದ್ಯೋಗ ಮಾಡುವ ಆಸಕ್ತಿ ಹೊಂದಿರುವ, ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಕರ್ಣಾಟಕ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗೆ ಸಂಬಂಧಿಸಿದಂತೆ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಗಳನ್ನು ತಿಳಿದುಕೊಳ್ಳಲು ಮುಂದೆ ಓದಿ.

ಅರ್ಜಿ ಸಲ್ಲಿಸುವ ಮುನ್ನ ಕೆಳಗೆ ನೀಡಲಾಗಿರುವ ಅಧಿಕೃತ ಅಧಿಸೂಚನೆಯನ್ನು ತೆರೆದು ಓದಿದ ಬಳಿಕ ಅರ್ಹತೆಯನ್ನು ಹೊಂದಿದ್ದರೆ ಅರ್ಜಿಯನ್ನು ಸಲ್ಲಿಸಿ.

ಹುದ್ದೆಯ ವಿವರ

ನೇಮಕಾತಿ ಸಂಸ್ಥೆ ಕರ್ಣಾಟಕ ಬ್ಯಾಂಕ್
ಒಟ್ಟು ಹುದ್ದೆಗಳುನಿರ್ದಿಷ್ಟಪಡಿಸಿಲ್ಲ
ಹುದ್ದೆಯ ಹೆಸರುಕಾರ್ಯದರ್ಶಿ
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ10 ಜನವರಿ 2023
ಮಾಸಿಕ ವೇತನ 84000/-

ವಿದ್ಯಾರ್ಹತೆ

ಕರ್ಣಾಟಕ ಬ್ಯಾಂಕಿನಲ್ಲಿ ಖಾಲಿಯಿರುವ ಕಾರ್ಯದರ್ಶಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಲು, ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ಮಂಡಳಿಗಳು / ವಿಶ್ವವಿದ್ಯಾಲಯಗಳಿಂದ ಸ್ನಾತಕೋತ್ತರ ಪದವಿ ಪಾಸ್ ಮಾಡಿರಬೇಕು.

ಅಭ್ಯರ್ಥಿಗಳು 01-12-2022 ರಂತೆ ಸ್ನಾತಕೋತ್ತರ ಪದವೀಧರರಾಗಿರಬೇಕು. ಫಲಿತಾಂಶಗಳಿಗಾಗಿ ಕಾಯುತ್ತಿರುವ ಅಭ್ಯರ್ಥಿಗಳು ಅಥವಾ
ಸ್ನಾತಕೋತ್ತರ ಪದವಿಯನ್ನು ಅನುಸರಿಸುವವರು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ.

ಇದನ್ನು ಓದಿರಿ: Karnataka Bank Recruitment 2023:ಕರ್ನಾಟಕ ಬ್ಯಾಂಕ್ ನೇಮಕಾತಿ

ವಯೋಮಿತಿ

ಕರ್ಣಾಟಕ ಬ್ಯಾಂಕಿನಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು 01-12-2022 ರಂತೆ ಗರಿಷ್ಠ 28 ವರ್ಷಗಳು [ಅಭ್ಯರ್ಥಿಯು 02-12-1994 ರಂದು ಅಥವಾ ನಂತರ ಜನಿಸಿರಬೇಕು] ಒಳಗಿರುವುದು ಕಡ್ಡಾಯವಾಗಿದೆ.

ಇನ್ನು ಕರ್ಣಾಟಕ ಬ್ಯಾಂಕಿನ ಈ ಹುದ್ದೆಗೆ ಅರ್ಜಿ ಸಲ್ಲಿಸುವ ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ 5 ವರ್ಷ ಸಡಿಲಿಕೆ ನೀಡಲಾಗಿದೆ.

ಅರ್ಜಿ ಶುಲ್ಕ

ಕರ್ಣಾಟಕ ಬ್ಯಾಂಕಿನಲ್ಲಿ ಖಾಲಿಯಿರುವ (Karnataka Bank Recruitment 2023) ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಸಾಮಾನ್ಯ ಅಭ್ಯರ್ಥಿಗಳಿಗೆ ರೂ. 800 ಅರ್ಜಿ ಶುಲ್ಕವನ್ನು ಪಾವತಿಸುವಂತೆ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಎಸ್‌ಸಿ/ಎಸ್‌ಟಿ ಅಭ್ಯರ್ಥಿಗಳಿಗೆ ರೂಪಾಯಿ 700 ನ್ನು ಆನ್ ಲೈನ್ ಮೂಲಕ ಪಾವತಿಸುವಂತೆ ಹೇಳಲಾಗಿದೆ.

ಇದನ್ನೂ ಓದಿರಿ: UPSC Recruitment 2023: ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ

ಆಯ್ಕೆ ಪ್ರಕ್ರಿಯೆ

ಫೆಬ್ರವರಿ 2023 ರಲ್ಲಿ ಬೆಂಗಳೂರು, ಚೆನ್ನೈನಲ್ಲಿ ತಾತ್ಕಾಲಿಕವಾಗಿ ನಿಗದಿಪಡಿಸಲಾದ ಆನ್‌ಲೈನ್ ಪರೀಕ್ಷೆ ನಡೆಸಲು ನಿರ್ಧರಿಸಲಾಗಿದೆ. ಈ ಪರೀಕ್ಷೆಯಲ್ಲಿ ತೇರ್ಗಡೆಯಾದ ಅಭ್ಯರ್ಥಿಗಳಿಗೆ ಬ್ಯಾಂಕಿನ ಪ್ರಧಾನ ಕಛೇರಿ, ಮಂಗಳೂರು ಅಥವಾ ಬ್ಯಾಂಕ್ ನಿರ್ಧರಿಸಿದಂತೆ ಯಾವುದೇ ಸ್ಥಳದಲ್ಲಿ ಸಂದರ್ಶನ ನಡೆಸಲಾಗುವುದು ಎಂದು ಹೇಳಲಾಗಿದೆ.

ಆಯ್ಕೆಯಾದ ಅಭ್ಯರ್ಥಿಗಳು ಕನಿಷ್ಠ ಮೂರು ವರ್ಷಗಳ ಅವಧಿಗೆ ಕರ್ಣಾಟಕ ಬ್ಯಾಂಕಿನಲ್ಲಿ ಕೆಲಸ ಮಾಡಲು ಬಾಂಡ್ ಅನ್ನು ನೀಡಬೇಕಾಗಿರುತ್ತದೆ.

ವೇತನ

ಕರ್ಣಾಟಕ ಬ್ಯಾಂಕಿನ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಒಂದು ವರ್ಷಗಳ ಕಾಲ ತರಬೇತಿ ಅವಧಿಯು ಇರುತ್ತದೆ. ನಂತರ ಕರ್ನಾಟಕ ಬ್ಯಾಂಕಿನ ಯಾವುದೇ ಬ್ರಾಂಚ್ ಗೆ ವರ್ಗಾಯಿಸಬಹುದಾಗಿದೆ. ಆಯ್ಕೆಯಾದ ಉದ್ಯೋಗಿಗಳಿಗೆ ಮಾಸಿಕವಾಗಿ 84,000/- ರೂ. ವೇತನವನ್ನು ನೀಡಲಾಗುತ್ತದೆ ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ಕರ್ಣಾಟಕ ಬ್ಯಾಂಕ್ ನ ಖಾಲಿಯಿರುವ ಹುದ್ದೆಗಳ (Karnataka Bank Recruitment 2023) ಭರ್ತಿಗೆ ಅರ್ಜಿ ಸಲ್ಲಿಸುವುದು ಹೇಗೆ ?

  • Karnataka Bank Recruitment 2023 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ. ಹುದ್ದೆಗೆ ಅರ್ಜಿ ಸಲ್ಲಿಸಲು ನೀಡಲಾದ ಮಾನದಂಡಗಳು ನೀವು ಹೊಂದಿರುವಿರೆ ಎಂದು ಪರಿಶೀಲಿಸಿಕೊಳ್ಳಿ.
  • ನಂತರ ಅಲ್ಲಿ ಕೇಳಲಾದ ಸ್ವವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಕೆಲಸದ ಅನುಭವವಿದ್ದರೆ ದಾಖಲೆಗಳು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಪಿಡಿಎಫ್ ವಿಧಾನದಲ್ಲಿ ಸಿದ್ಧಪಡಿಸಿಕೊಳ್ಳಿ.
  • ಅಭ್ಯರ್ಥಿಗಳು ಕೆಳಗೆ ನೀಡಲಾಗಿರುವ ಕರ್ಣಾಟಕ ಬ್ಯಾಂಕಿನ ಹುದ್ದೆಗೆ ಅರ್ಜಿ ಸಲ್ಲಿಸುವ ಲಿಂಕನ್ನು ಕ್ಲಿಕ್ ಮಾಡಿ.
  • ಅಪ್ಲಿಕೇಶನ್ ಅನ್ನು ನೋಂದಾಯಿಸಲು, Click here for New Registration ಟ್ಯಾಬ್ ಅನ್ನು ಆಯ್ಕೆ ಮಾಡಿ. ಇಲ್ಲಿ ಹೆಸರು, ಸಂಪರ್ಕವನ್ನು ನಮೂದಿಸಿ
  • ವಿವರಗಳು ಮತ್ತು ಇಮೇಲ್ ಐಡಿ. ತಾತ್ಕಾಲಿಕ ನೋಂದಣಿ ಸಂಖ್ಯೆ ಮತ್ತು ಪಾಸ್‌ವರ್ಡ್ ಅನ್ನು ರಚಿಸಿಕೊಳ್ಳಿ.
  • ಅಭ್ಯರ್ಥಿಯ ತಾತ್ಕಾಲಿಕ ನೋಂದಣಿ ದಾಖಲೆಗಳನ್ನು ಪರದೆಯ ಮೇಲೆ ಪ್ರದರ್ಶಿಸಲಾಗುತ್ತದೆ. ಅಲ್ಲದೇ
  • ಸಂಖ್ಯೆ ಮತ್ತು ಪಾಸ್ವರ್ಡ್, ತಾತ್ಕಾಲಿಕ ನೋಂದಣಿ ಸಂಖ್ಯೆಯನ್ನು ಸೂಚಿಸುವ ಇಮೇಲ್ ಮತ್ತು ಎಸ್ ಎಂ ಎಸ್ ಮೂಲಕವೂ ಕಳುಹಿಸಲಾಗುವುದು.
  • ನಂತರ ನಿಮ್ಮ ಲಾಗಿನ್ ಮಾಹಿತಿಗಳನ್ನು ಹಾಕಿ ಲಾಗ್ ಇನ್ ಮಾಡಿ.
  • ನಂತರ ಅರ್ಜಿ ನಮೂನೆಯಲ್ಲಿ ನಿಮ್ಮ ಸರಿಯಾದ ಮಾಹಿತಿಗಳನ್ನು ಪೂರೈಸಿ.
  • ನಿಮ್ಮ ಇತ್ತೀಚಿನ ಫೋಟೋ ಮತ್ತು ಸಹಿಯನ್ನು ಪೂರೈಕೆ ಮಾಡಿ.
  • ಎಲ್ಲ ಮಾಹಿತಿಗಳು ಸರಿಯಾಗಿ ನಮೂದಿಸಿರುವಿರೇ ಎಂದು ಮತ್ತೊಮ್ಮೆ ಪರೀಕ್ಷಿಸಿಕೊಳ್ಳಿ.
  • ನಿಮ್ಮ ವರ್ಗಕ್ಕೆ ತಿಳಿಸಲಾಗಿರುವ ಅರ್ಜಿಯ ಶುಲ್ಕವನ್ನು ಪಾವತಿಸಿ.
  • ಕೊನೆಯಲ್ಲಿ ನಿಮ್ಮ ಅರ್ಜಿ ನಮೂನೆಯನ್ನು ಸಲ್ಲಿಸಿ, ಪ್ರಿಂಟ್ ಕಾಪಿ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸುವ ಪ್ರಾರಂಭ ದಿನಾಂಕ : 31/12/2022
ಅರ್ಜಿ ಸಲ್ಲಿಸುವ ಕೊನೆಯ ದಿನಾಂಕ : 10/01/2023

ಇದನ್ನೂ ಓದಿರಿ: PGCIL Recruitment 2022: ಪವರ್​ ಗ್ರಿಡ್ ಕಾರ್ಪೊರೇಷನ್​ನಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪ್ರಮುಖ ಲಿಂಕುಗಳು

ಅಧಿಕೃತ ವೆಬ್ ಸೈಟ್: ಕ್ಲಿಕ್ ಮಾಡಿ

ಅಧಿಕೃತ ಅಧಿಸೂಚನೆ: ಕ್ಲಿಕ್ ಮಾಡಿ

ಅರ್ಜಿ ಸಲ್ಲಿಸಲು ಲಿಂಕ್: ಕ್ಲಿಕ್ ಮಾಡಿ

Sharing Is Caring: