ಗ್ರಾಮ ಲೆಕ್ಕಾಧಿಕಾರಿ ನೇಮಕಾತಿ!1,000 ಹುದ್ದೆಗಳಿಗೆ ಅರ್ಜಿ ಆಹ್ವಾನ! PUC ಪಾಸ್ ಆಗಿದ್ದರೆ ಇಲ್ಲಿದೆ ನೋಡಿ ಅರ್ಜಿ ಸಲ್ಲಿಸಲು ಡೈರೆಕ್ಟ್ ಲಿಂಕ್

ನೀವು PUC ಉತ್ತೀರ್ಣರಾಗಿ ಉದ್ಯೋಗಕ್ಕಾಗಿ ಹುಡುಕುತ್ತಿದ್ದಿರಾ ? ಹಾಗಾದರೆ ರಾಜ್ಯ ಸರಕಾರ ನಿಮಗೆ ಗುಡ್ ನ್ಯೂಸ್ ನೀಡಿದೆ. ಕರ್ನಾಟಕ ಸರ್ಕಾರದ ಕಂದಾಯ ಇಲಾಖೆಯು ಅಧಿಕೃತವಾಗಿ ಅಧಿಸೂಚನೆಯನ್ನು ಹೊರಡಿಸಿದ್ದು, 1,000 ಗ್ರಾಮ ಲೆಕ್ಕಾಧಿಕಾರಿಗಳನ್ನು ನೇಮಕ ಮಾಡಿಕೊಳ್ಳಲಿದೆ.

ಕಂದಾಯ ಇಲಾಖೆಯ ಅಧಿಸೂಚನೆಯ ಪ್ರಕಾರ ಖಾಲಿಯಿರುವ 1,000 ಗ್ರಾಮ ಲೆಕ್ಕಾಧಿಕಾರಿ ಹುದ್ದೆಗಳನ್ನು ಭರ್ತಿಮಾಡಿಕೊಳ್ಳಲು ಯೋಜಿಸಲಾಗಿದೆ. ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಅಗತ್ಯ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಶ್ರೇಣಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕು.

ಈ ಹುದ್ದೆಗೆ ಅರ್ಜಿಯನ್ನು ಸಲ್ಲಿಸುವುದಕ್ಕೂ ಮುನ್ನ ವಿದ್ಯಾರ್ಹತೆ, ವಯೋಮಿತಿ ಹಾಗೂ ವೇತನ ಎಷ್ಟು ದೊರೆಯಲಿದೆ ಎನ್ನುವ ಕುರಿತಂತೆ ಅಗತ್ಯ ಮಾಹಿತಿಯನ್ನು ತಿಳಿಯುವುದು ಅಗತ್ಯವಾಗಿದೆ. ಈ ಕುರಿತಂತೆ ಸಂಪೂರ್ಣ ಮಾಹಿತಿಯನ್ನು ಕೆಳಗೆ ನೀಡಲಾಗಿದ್ದು, ಸಂಪೂರ್ಣವಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ವಿದ್ಯಾರ್ಹತೆ

ಕಂದಾಯ ಇಲಾಖೆ, ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯ ಅಥವಾ ಮಂಡಳಿಯಿಂದ ದ್ವಿತೀಯ ಪಿ ಯು ಸಿ ಅಥವಾ ಸತ್ಸಮಾನ ವಿದ್ಯಾರ್ಹತೆಯನ್ನು ಹೊಂದಿರಬೇಕೆಂದು ಹೇಳಲಾಗಿದೆ.

ವಯೋಮಿತಿ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಹೊರಡಿಸಿರುವ ಅಧಿಸೂಚನೆಯ ಪ್ರಕಾರ, ಅರ್ಜಿ ಸಲ್ಲಿಕೆಗೆ ನಿಗಧಿಯಾದ ದಿನಾಂಕಕ್ಕೆ ಅಭ್ಯರ್ಥಿಯು ಕನಿಷ್ಠ 18 ವರ್ಷ ಪೂರೈಸಿರಬೇಕು. ಅಲ್ಲದೇ ಎಸ್ಸಿ, ಎಸ್ಟಿ, ಪ್ರವರ್ಗ 1 ಸೇರಿದಂತೆ ಮೀಸಲಾತಿ ವರ್ಗಗಳಿಗೆ ವಯೋಮಿತಿಯಲ್ಲಿ ಸಡಿಲಿಕೆ ನೀಡಲಾಗಿದೆ. ಸಾಮಾನ್ಯ ವರ್ಗದ ಅಭ್ಯರ್ಥಿಗಳು ಗರಿಷ್ಠ 35 ವರ್ಷಕ್ಕೆ ಮೀರಿರಬಾರದು ಎಂದು ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಅಧಿಸೂಚನೆಯನ್ನು ಪರಿಶೀಲಿಸಿ.

ವೇತನ

ಅಧಿಸೂಚನೆಯಲ್ಲಿ ತಿಳಿಸಿರುವಂತೆ ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 21,400 ರಿಂದ ರೂ. 42,000 ರದ ವರೆಗೆ ವೇತನ ನೀಡಲಾಗುವುದು ಎಂದು ತಿಳಿಸಲಾಗಿದೆ.

ಅರ್ಜಿ ಶುಲ್ಕ

ಪ.ಜಾತಿ/ಪ.ಪಂ/ಪ್ರ1/ ಅಭ್ಯರ್ಥಿಗಳು ರೂ. 500/- ಹಾಗೂ 2ಎ,2ಬಿ,3ಎ,3ಬಿ, ಅಭ್ಯರ್ಥಿಗಳು ರೂ. 750/- ಮತ್ತು ಸಾಮಾನ್ಯ ವರ್ಗದ ಅಭ್ಯರ್ಥಿಗಳು ರೂ. 300/- ಅರ್ಜಿ ಶುಲ್ಕ ಪಾವತಿಸಲು ತಿಳಿಸಲಾಗಿದೆ.

ಆಯ್ಕೆ ವಿಧಾನ

ಗ್ರಾಮ ಲೆಕ್ಕಾಧಿಕಾರಿ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳಿಗೆ ಸ್ಪರ್ಧಾತ್ಮಕ ಪರೀಕ್ಷೆ ನಡೆಸಿ ಆಯ್ಕೆ ಮಾಡಿಕೊಳ್ಳಲಗುವುದು.

ಪ್ರಮುಖ ದಿನಾಂಕಗಳು

ಅರ್ಜಿ ಸಲಿಸಲು ಪ್ರಾರಂಭ ದಿನಾಂಕ :- 05 ಏಪ್ರಿಲ್ 2024

ಅರ್ಜಿ ಸಲಿಸಲು ಕೊನೆಯ ದಿನಾಂಕ :- 04 ಮೇ 2024

ಪ್ರಮುಖ ಲಿಂಕುಗಳು

ಅಧಿಕೃತ ಅಧಿಸೂಚನೆಇಲ್ಲಿ ಕ್ಲಿಕ್ ಮಾಡಿ
ಅಧಿಕೃತ ವೆಬ್‌ಸೈಟ್ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಚಾನೆಲ್ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಂ ಚಾನೆಲ್ಇಲ್ಲಿ ಕ್ಲಿಕ್ ಮಾಡಿ

Sharing Is Caring: