PGCIL Recruitment 2022: ಪವರ್​ ಗ್ರಿಡ್ ಕಾರ್ಪೊರೇಷನ್​ನಲ್ಲಿ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿ ಆಹ್ವಾನ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್​ (PGCIL Recruitment 2022) ನಲ್ಲಿ ಖಾಲಿಯಿರುವ ಮ್ಯಾನೇಜರ್ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಒಟ್ಟು 23 ಹುದ್ದೆಗಳು ಕಾಲಿಯಿದ್ದು, ಆಸಕ್ತರು ಜನವರಿ 14, 2023ರ ಒಳಗೆ ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಅಸಿಸ್ಟೆಂಟ್ ಮ್ಯಾನೇಜರ್ ಮತ್ತು ಡೆಪ್ಯುಟಿ ಮ್ಯಾನೇಜರ್ ಒಟ್ಟು 23 ಹುದ್ದೆಗಳು ಖಾಲಿಯಿದ್ದು, ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (Power Grid Corporation of India Limited) ನಲ್ಲಿ ಉದ್ಯೋಗ ಮಾಡುವ ಆಸಕ್ತಿಯನ್ನು ಹೊಂದಿದವರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ನಿಮ್ಮ ನೆಚ್ಚಿನ ಉದ್ಯೋಗ ಸಾತಿ ಡಾಟ್ ಕಾಮ್ ನಲ್ಲಿ PGCIL Recruitment 2022 ರ ಕುರಿತಾಗಿ ಸಂಪೂರ್ಣ ಮಾಹಿತಿ, ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಕುರಿತಾಗಿ ಮಾಹಿತಿಗಳನ್ನು ಕೆಳಗೆ ನೀಡಲಾಗಿದೆ ಮುಂದೆ ಓದಿ.

ಹುದ್ದೆಯ ವಿವರ

ಡೆಪ್ಯುಟಿ ಮ್ಯಾನೇಜರ್ (AI/ML)2
ಡೆಪ್ಯುಟಿ ಮ್ಯಾನೇಜರ್ (SAP-HCM)6
ಡೆಪ್ಯುಟಿ ಮ್ಯಾನೇಜರ್ (SAP-BASIS)1
ಅಸಿಸ್ಟೆಂಟ್ ಮ್ಯಾನೇಜರ್(ಕ್ಲೌಡ್​ ಇನ್​ಫ್ರಾಸ್ಟ್ರಕ್ಚರ್ ಮ್ಯಾನೇಜ್​ಮೆಂಟ್)1
ಅಸಿಸ್ಟೆಂಟ್ ಮ್ಯಾನೇಜರ್ (ಡೇಟಾ ಎಂಜಿನಿಯರ್)1
ಅಸಿಸ್ಟೆಂಟ್ ಮ್ಯಾನೇಜರ್ (SAP)4
ಡೆಪ್ಯುಟಿ ಮ್ಯಾನೇಜರ್ (ಸೈಬರ್ ಸೆಕ್ಯುರಿಟಿ)4
ಅಸಿಸ್ಟೆಂಟ್ ಮ್ಯಾನೇಜರ್ (ಓಪನ್ ಸೋರ್ಸ್ ಅಪ್ಲಿಕೇಶನ್​ ಡೆವಪಲರ್)4

ವಿದ್ಯಾರ್ಹತೆ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿಯಿರುವ ಮ್ಯಾನೇಜರ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿಇ/ಬಿ.ಟೆಕ್, ಬಿಎಸ್ಸಿ, ಎಂಇ/ಎಂ.ಟೆಕ್​​ ಪೂರ್ಣಗೊಳಿಸಿರುವುದು ಅವಶ್ಯವಾಗಿದೆ ಎಂದು PGCIL Recruitment 2022 ರ ಅಧಿಸೂಚನೆಯಲ್ಲಿ ತಿಳಿಸಲಾಗಿದೆ.

ವಯೋಮಿತಿ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನ ಅಧಿಸೂಚನೆಯ ಪ್ರಕಾರ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಗರಿಷ್ಠ 36 ವರ್ಷ ಮತ್ತು ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಗರಿಷ್ಠ 33 ವರ್ಷ ಒಳಗೆ ಇರುವುದು ಅವಶ್ಯವಾಗಿದೆ.

ಈ ಹುದ್ದೆಗಳ ನೇಮಕಾತಿಯಲ್ಲಿ ಕೆಲವು ವಯೋಮಿತಿ ಸಡಿಲಿಕೆಯನ್ನೂ ನೀಡಲಾಗಿದೆ. ಅವು ಏನೆಂದರೆ ಒಬಿಸಿ(NCL) ಅಭ್ಯರ್ಥಿಗಳಿಗೆ 3 ವರ್ಷ ಹೆಚ್ಚಿನ ವಯೋಮಿತಿಯಲ್ಲಿ ಸಡಿಲಿಕೆ ದೊರೆಯಲಿದೆ. ಅಲ್ಲದೇ ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ಸಡಿಲಿಕೆಯನ್ನು ಅಧಿಸೂಚನೆಯಲ್ಲಿ ನೀಡಲಾಗಿದೆ.

ಅರ್ಜಿ ಶುಲ್ಕ

ಈ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಬಯಸುವ ಎಸ್ಸಿ/ಎಸ್ಟಿ/ಪಿಡಬ್ಲ್ಯೂಡಿ/ ಮಾಜಿ ಸೈನಿಕ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿಯನ್ನು ನೀಡಲಾಗಿದೆ. ಉಳಿದಂತೆ ಇರತ ಅಭ್ಯರ್ಥಿಗಳಿಗೆ 500 ರೂ. ಅರ್ಜಿ ಶುಲ್ಕವನ್ನು ಆನ್ ಲೈನ್ ಮೂಲಕ ಪಾವತಿಸಲು ಹೇಳಲಾಗಿದೆ.

ಆಯ್ಕೆ ಪ್ರಕ್ರಿಯೆ

ಅಧಿಸೂಚನೆಯಲ್ಲಿ ತಿಳಿಸಿರುವಂತೆ, ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನ ಮ್ಯಾನೇಜರ್ ಹುದ್ದೆಗೆ ಅರ್ಜಿಯನ್ನು ಸಲ್ಲಿಸಿದ ಅಭ್ಯರ್ಥಿಗಳ ಸ್ಕ್ರೀನಿಂಗ್ ಟೆಸ್ಟ್​ ಮಾಡಲಾಗುತ್ತದೆ. ನಂತರ ಪ್ರತಿಯೊಬ್ಬರನ್ನೂ ನೇರ ಸಂದರ್ಶನ ಮಾಡುವ ಮೂಲಕ ಕಂಪನಿಯ ಹುದ್ದೆಗಳಿಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿರಿ: RRI Recruitment 2022: ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ವೇತನ

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನ ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 70,000 ದಿಂದ 2,00,000 ರೂಪಾಯಿಗಳನ್ನು ನೀಡಲಾಗುತ್ತದೆ. ಅಸಿಸ್ಟೆಂಟ್ ಮ್ಯಾನೇಜರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ ರೂ. 60,000 ದಿಂದ 1,80,000 ರೂಪಾಯಿಗಳ ವರೆಗೆ ನೀಡಲಾಗುವುದು.

ಪವರ್ ಗ್ರಿಡ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನ ಖಾಲಿಯಿರುವ ಹುದ್ದೆಗಳ (PGCIL Recruitment 2022) ಭರ್ತಿಗೆ ಅರ್ಜಿ ಸಲ್ಲಿಸುವುದು ಹೇಗೆ ?

  • PGCIL Recruitment 2022 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ. ಹುದ್ದೆಗೆ ಅರ್ಜಿ ಸಲ್ಲಿಸಲು ನೀಡಲಾದ ಮಾನದಂಡಗಳು ನೀವು ಹೊಂದಿರುವಿರೆ ಎಂದು ಪರಿಶೀಲಿಸಿಕೊಳ್ಳಿ.
  • ನಂತರ ಅಲ್ಲಿ ಕೇಳಲಾದ ಸ್ವವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಕೆಲಸದ ಅನುಭವವಿದ್ದರೆ ದಾಖಲೆಗಳು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಪಿಡಿಎಫ್ ವಿಧಾನದಲ್ಲಿ ಸಿದ್ಧಪಡಿಸಿಕೊಳ್ಳಿ.
  • ಕೆಳಗೆ ನೀಡಲಾಗಿರುವ www.powergrid.in ವೆಬ್ ಸೈಟ್ ಲಿಂಕನ್ನು ಕ್ಲಿಕ್ ಮಾಡಿ.
  • Careers ಟ್ಯಾಬ್ ಮೇಲೆ ಕ್ಲಿಕ್ ಮಾಡಿ. ನಂತರ opportunities -> openings ಮೇಲೆ ಕ್ಲಿಕ್ ಮಾಡಿ.
  • ನಂತರ ಸ್ವಲ್ಪ ಕೆಳಗೆ ಮ್ಯಾನೇಜರ್ ಹುದ್ದೆಗೆ ಅರ್ಜಿ ಕರೆದಿರುವುದು ಕಾಣಿಸುತ್ತದೆ, ಅಲ್ಲಿ Click here to apply ಎಂಬ ಆಯ್ಕೆ ಕಾಣಿಸುತ್ತದೆ.
  • ನಂತರ ಆನ್ ಲೈನ್ ಅರ್ಜಿ ನಮುನೆ ತೆರೆದುಕೊಳ್ಳುತ್ತದೆ. ಅಲ್ಲಿ ಸರಿಯಾಗಿ ನಿಮ್ಮ ಮಾಹಿತಿಗಳನ್ನು ಭರ್ತಿ ಮಾಡಿ.
  • ನೀವು ನೀಡಿರುವ ಎಲ್ಲ ಮಾಹಿತಿಗಳು ಪೂರ್ಣ ಮತ್ತು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿಕೊಳ್ಳಿ.
  • ನಂತರ ನಿಮ್ಮ ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ಕಾಪಿ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 23 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನ: 14 ಜನೆವರಿ 2023

ಇದನ್ನೂ ಓದಿರಿ: UPSC Recruitment 2023: ಕೇಂದ್ರ ಸರ್ಕಾರಿ ಹುದ್ದೆಗಳ ನೇಮಕಾತಿ

ಪ್ರಮುಖ ಲಿಂಕುಗಳು

ಅಧಿಕೃತ ವೆಬ್‌ಸೈಟ್: ಕ್ಲಿಕ್ ಮಾಡಿ

ಅಧಿಕೃತ ಅಧಿಸೂಚನೆ: ಕ್ಲಿಕ್ ಮಾಡಿ

ನೇರವಾಗಿ ಅರ್ಜಿ ಸಲ್ಲಿಸಿ: ಕ್ಲಿಕ್ ಮಾಡಿ

Sharing Is Caring: