ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ಖಾಲಿ ಇರುವ (RailTel Recruitment 2023)ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಿದ್ದು, ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ. ರೈಲ್ವೆ ಇಲಾಖೆಯಲ್ಲಿ ಡೆಪ್ಯುಟಿ ಮ್ಯಾನೇಜರ್ ಹಾಗೂ ಸೀನಿಯರ್ ಮ್ಯಾನೇಜರ್ ಹುದ್ದೆಗಳು ಕಲಿಯಿದ್ದು, ನವೆಂಬರ್ 11 ರ ಒಳಗೆ ಆಫ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಿ.
ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.
ಹುದ್ದೆಯ ಮಾಹಿತಿ
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ (RailTel Corporation of India Limited) ನಲ್ಲಿ ಒಟ್ಟು 21 ಹುದ್ದೆಗಳು ಕಲಿಯಿದ್ದು, ಹುದ್ದೆಯ ಹೆಸರು ಮತ್ತು ಲಭ್ಯವಿರುವ ಹುದ್ದೆಗಳ ವಿವರ ಈ ಕೆಳಗಿನಂತೆ ಇರುತ್ತದೆ.
ಹುದ್ದೆಯ ಹೆಸರು | ಲಭ್ಯವಿರುವ ಹುದ್ದೆಗಳು |
---|---|
ಡೆಪ್ಯುಟಿ ಮ್ಯಾನೇಜರ್ | 8 |
ಮ್ಯಾನೇಜರ್ | 6 |
ಸೀನಿಯರ್ ಮ್ಯಾನೇಜರ್ | 7 |
ವಿದ್ಯಾರ್ಹತೆ
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ(RailTel Recruitment 2023)ಯಲ್ಲಿ ಭಾಗವಹಿಸಲು ಅಧಿಸೂಚನೆಯ ಪ್ರಕಾರ, ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ/ಮಂಡಳಿಯಿಂದ ಕಡ್ಡಾಯವಾಗಿ ಬಿ.ಎಸ್ಸಿ, ಬಿಇ/ಬಿ.ಟೆಕ್, ಎಂ.ಎಸ್ಸಿ, ಎಂಸಿಎ ಪದವಿಯನ್ನು ಪಡೆದಿರುವುದು ಅವಶ್ಯವಾಗಿದೆ.
ವಯೋಮಿತಿ
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿಯಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು, ಅಧಿಸೂಚನೆಯ ಪ್ರಕಾರ ಅಭ್ಯರ್ಥಿಗಳ ವಯಸ್ಸು ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ 21ರಿಂದ 30 ವರ್ಷ, ಮ್ಯಾನೇಜರ್ ಹುದ್ದೆಗೆ 23 ರಿಂದ 30 ವರ್ಷ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗಳಿಗೆ 27ರಿಂದ 34 ವರ್ಷ ಮೀರಿರಬಾರದು.
ಇದಲ್ಲದೇ OBC, SC/ST, PwBD ಅಭ್ಯರ್ಥಿಗಳಿಗೆ ವಯೋಮಿತಿಯಲ್ಲಿ ಸಡಿಲಿಕೆಯನ್ನು ಒದಗಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಕೆಳಗೆ ಅಧಿಸೂಚಿಯ ಲಿಂಕನ್ನು ನೀಡಲಾಗಿದ್ದು, ಅದರಲ್ಲಿನ ಸಂಪೂರ್ಣ ಮಾಹಿತಿಯನ್ನು ಪರಿಶೀಲಿಸಿ.
ಅರ್ಜಿ ಶುಲ್ಕ
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನೇಮಕಾತಿ ಅಧಿಸೂಚನೆ ಪ್ರಕಾರ, SC/ST/PwBD ಅಭ್ಯರ್ಥಿಗಳು ರೂಪಾಯಿ 600/-, ಉಳಿದ ಎಲ್ಲಾ ಇತರ ಅಭ್ಯರ್ಥಿಗಳು 1200/- ರೂಪಾಯಿಗಳನ್ನು ಡಿಮ್ಯಾಂಡ್ ಡ್ರಾಫ್ಟ್ (ಡಿ.ಡಿ.) ಮೂಲಕ ಪಾವತಿಸಲು ತಿಳಿಸಲಾಗಿದೆ.
ವೇತನ
ಹುದ್ದೆಗಳಿಗೆ ಆಯ್ಕೆಯಾದ ಸದಸ್ಯರಿಗೆ ಅಧಿಸೂಚನೆಯ ಪ್ರಕಾರ, ಡೆಪ್ಯುಟಿ ಮ್ಯಾನೇಜರ್ ಹುದ್ದೆಗೆ ಮಾಸಿಕ 40,000 ದಿಂದ 1,40,000 ರೂಪಾಯಿಗಳು, ಮ್ಯಾನೇಜರ್ ಹುದ್ದೆಗಳಿಗೆ ಮಾಸಿಕ 50,000 ದಿಂದ 1,60,000 ರೂಪಾಯಿ ಮತ್ತು ಸೀನಿಯರ್ ಮ್ಯಾನೇಜರ್ ಹುದ್ದೆಗೆ ಮಾಸಿಕ 60,000 ದಿಂದ 1,80,000 ರೂಪಾಯಿಗಳ ವರೆಗೆ ಪಾವತಿಸುವುದಾಗಿ ತಿಳಿಸಲಾಗಿದೆ.
ಆಯ್ಕೆ ಪ್ರಕ್ರಿಯೆ
ಸ್ಕಿಲ್ ಟೆಸ್ಟ್
ಲಿಖಿತ ಪರೀಕ್ಷೆ
ದಾಖಲಾತಿ ಪರಿಶೀಲನೆ
ಸಂದರ್ಶನ
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್ ನಲ್ಲಿ ಖಾಲಿಯಿರುವ ಹುದ್ದೆಗಳಿಗೆ (RailTel Recruitment 2023) ಅರ್ಜಿಯನ್ನು ಸಲ್ಲಿಸುವುದು ಹೇಗೆ ?
ಆಸಕ್ತ ಅಭ್ಯರ್ಥಿಗಳು ಭರ್ತಿ ಮಾಡಿದ ಅರ್ಜಿ ನಮೂನೆಯನ್ನು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಲು ಕೋರಲಾಗಿದೆ.
ಜನರಲ್ ಮ್ಯಾನೇಜರ್/ಎಚ್‌ಆರ್
ರೈಲ್‌ಟೆಲ್ ಕಾರ್ಪೊರೇಷನ್ ಆಫ್ ಇಂಡಿಯಾ ಲಿಮಿಟೆಡ್
ಪ್ಲೇಟ್-ಎ
6ನೇ ಮಹಡಿ
ಕಛೇರಿ ಬ್ಲಾಕ್-II
ಪೂರ್ವ ಕಿದ್ವಾಯಿ ನಗರ
ನವದೆಹಲಿ-110023
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 21/10/2023
ಅರ್ಜಿ ಸಲ್ಲಿಸಲು ಕೊನೆಯ ದಿನ: 11/11/ 2023
ಪ್ರಮುಖ ಲಿಂಕುಗಳು
ಅಧಿಕೃತ ವೆಬ್ ಸೈಟ್: ಕ್ಲಿಕ್ ಮಾಡಿ