RRI Recruitment 2022: ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

ಬೆಂಗಳೂರಿನ ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (Raman Research Institute) ಖಾಲಿಯಿರುವ ವಿವಿಧ ಹುದ್ದೆಗಳಿಗೆ (RRI Recruitment 2022)ಅರ್ಜಿಯನ್ನು ಆಹ್ವಾನಿಸಿದ್ದು, ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಕೋರಲಾಗಿದೆ. ಬಿ ಇ, ಬಿ ಟೆಕ್, ಎಂ ಎಸ್ಸಿ, ಎಂ ಟೆಕ್ ಪೂರ್ಣಗೊಳಿಸಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

RRI Recruitment 2022 ರ ಅಧಿಸೂಚನೆಯ ಪ್ರಕಾರ ಒಟ್ಟು 6 ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗಳು ಖಾಲಿಯಿದ್ದು, ಆಸಕ್ತರು ಜನವರಿ 06, 2023 ರ ಒಳಗಾಗಿ ಆನ್ ಲೈನ್ ಮೂಲಕ ಅರ್ಜಿಯನ್ನು ಸಲ್ಲಿಸಲು ತಿಳಿಸಲಾಗಿದೆ.

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

ಹುದ್ದೆಯ ಮಾಹಿತಿ

ಉದ್ಯೋಗದ ಹೆಸರು ಖಾಲಿಯಿರುವ ಹುದ್ದೆಗಳು
ಬಯೋಫಿಜಿಕ್ಸ್​ ಪ್ರಾಜೆಕ್ಟ್3
ಮೈಕ್ರೋಫ್ಲುಡಿಕ್ಸ್ & ನಾನೋಪೋರ್ ಸೀಕ್ವೆನ್ಸಿಂಗ್ ಪ್ರಾಜೆಕ್ಟ್3

ವಿದ್ಯಾರ್ಹತೆ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ (Raman Research Institute) ಖಾಲಿಯಿರುವ ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅಭ್ಯರ್ಥಿಗಳು ಕಡ್ಡಾಯವಾಗಿ ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯದಿಂದ ಬಿಇ, ಬಿ.ಟೆಕ್, ಎಂಎಸ್ಸಿ, ಎಂ ಟೆಕ್ ಪೂರ್ಣಗೊಳಿಸಿರಬೇಕು.

ವಯೋಮಿತಿ

RRI Recruitment 2022 ರ ಅಧಿಸೂಚನೆಯ ಪ್ರಕಾರ ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಗಳ ವಯಸ್ಸು ಜನವರಿ 6, 2023ಕ್ಕೆ ಗರಿಷ್ಠ 45 ವರ್ಷ ಮೀರಿರಬಾರದು.

ಇನ್ನು SC/ST/OBC/PWD ಅಭ್ಯರ್ಥಿಗಳಿಗೆ ಸರಕಾರದ ನಿಯಮಾವಳಿಯ ಪ್ರಕಾರ ವಯೋಮಿತಿಯಲ್ಲಿ ಸಡಿಲಿಕೆಯನ್ನು ನೀಡಲಾಗುವುದು. ಈ ಕುರಿತಂತೆ ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯ ಅಧಿಕೃತ ವೆಬ್ ಸೈಟ್ ಅಥವಾ ನೋಟಿಫಿಕೇಶನ್ ನೋಡಿರಿ.

ಆಯ್ಕೆಯ ವಿಧಾನ

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ ಮತ್ತು ಸಂದರ್ಶನ ನಡೆಸುವ ಮೂಲಕ ಆಯ್ಕೆ ಮಾಡಿಕೊಳ್ಳಲಾಗುತ್ತದೆ.

ಇದನ್ನೂ ಓದಿರಿ: IISc Recruitment 2022: ಭಾರತೀಯ ವಿಜ್ಞಾನ ಸಂಸ್ಥೆಯಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ

ವೇತನ

RRI Recruitment 2022 ರ ಅಧಿಸೂಚನೆಯ ಪ್ರಕಾರ, ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ 23,500 ರೂಪಾಯಿಗಳನ್ನು ಮಾಸಿಕ ವೇತನವಾಗಿ ನೀಡಲಾಗುತ್ತದೆ ಎಂದು ತಿಳಿಸಿದ್ದಾರೆ.

Raman Research Institute Recruitment 2022

ಮುಂದಿನ ವರ್ಷದಿಂದ 1000 ರೂಪಾಯಿಗಳಂತೆ ಹೆಚ್ಚಳ ಮಾಡುವ ಕುರಿತು ಮಾಹಿತಿ ನೀಡಿರುತ್ತಾರೆ.

ರಾಮನ್ ಸಂಶೋಧನಾ ಸಂಸ್ಥೆಯಲ್ಲಿ ಖಾಲಿಯಿರುವ ರಿಸರ್ಚ್​ ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸುವುದು ಹೇಗೆ ?

  • RRI Recruitment 2022 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ. ಹುದ್ದೆಗೆ ಅರ್ಜಿ ಸಲ್ಲಿಸಲು ನೀಡಲಾದ ಮಾನದಂಡಗಳನ್ನು ನೀವು ಹೊಂದಿರುವಿರೆ ಎಂದು ಪರಿಶೀಲಿಸಿಕೊಳ್ಳಿ.
  • ನಂತರ ಅಲ್ಲಿ ಕೇಳಲಾದ ಸ್ವವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಕೆಲಸದ ಅನುಭವವಿದ್ದರೆ ದಾಖಲೆಗಳು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಪಿಡಿಎಫ್ ವಿಧಾನದಲ್ಲಿ ಸಿದ್ಧಪಡಿಸಿಕೊಳ್ಳಿ.
  • ನಂತರ ಕೆಳಗೆ ನೀಡಲಾಗಿರುವ ಸಂಸ್ಥೆಯ ಅಧಿಕೃತ ವೆಬ್ ಸೈಟ್ www.rri.res.in ಗೆ ಭೇಟಿ ನೀಡಿ.
  • ಆನ್ ಲೈನ್ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ.
  • ಅಗತ್ಯವಿರುವ ದಾಖಲೆಗಳನ್ನು ಪೂರೈಸಿ, ಎಲ್ಲ ಮಾಹಿತಿಗಳು ಸರಿಯಾಗಿವೆಯೇ ಎಂದು ಮತ್ತೊಮ್ಮೆ ಪರಿಶೀಲಿಸಿಕೊಳ್ಳಿ.
  • ನಂತರ ನಿಮ್ಮ ಅರ್ಜಿಯನ್ನು ಸಲ್ಲಿಸಿ ಮತ್ತು ಪ್ರಿಂಟ್ ಕಾಪಿ ತೆಗೆದುಕೊಳ್ಳಿ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಕೆ ಆರಂಭ ದಿನಾಂಕ: 13 ಡಿಸೆಂಬರ್ 2022
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 06 ಜನೆವರಿ 2023

ಪ್ರಮುಖ ಲಿಂಕುಗಳು

ಅಧಿಕೃತ ನೋಟಿಫಿಕೇಶನ್ – 1 ಕ್ಲಿಕ್ ಮಾಡಿ

ಅಧಿಕೃತ ನೋಟಿಫಿಕೇಶನ್ – 2 ಕ್ಲಿಕ್ ಮಾಡಿ

ಅಧಿಕೃತ ವೆಬ್ ಸೈಟ್ : ಕ್ಲಿಕ್ ಮಾಡಿ

ನೇರವಾಗಿ ಅರ್ಜಿ ಸಲ್ಲಿಸಿ: (RA-MICRONANO-2022) ಕ್ಲಿಕ್ ಮಾಡಿ 

ನೇರವಾಗಿ ಅರ್ಜಿ ಸಲ್ಲಿಸಿ: (RA-BIOPHYSICS-2022) ಕ್ಲಿಕ್ ಮಾಡಿ

Sharing Is Caring: