Social Welfare Department Scholarship:ಸಮಾಜ ಕಲ್ಯಾಣ ಇಲಾಖೆಯಿಂದ ಸ್ಕಾಲರ್‌ಶಿಪ್‌ ಈಗಲೆ ಅರ್ಜಿ ಸಲ್ಲಿಸಿ

ಕರ್ನಾಟಕ ಸರ್ಕಾರದ ಸಮಾಜ ಕಲ್ಯಾಣ ಇಲಾಖೆಯು ವಿವಿಧ ಕೋರ್ಸುಗಳನ್ನು ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳಿಗೆ (Social Welfare Department Scholarship) ಸ್ಕಾಲರ್‌ಶಿಪ್‌ ನೀಡಲು ಮುಂದಾಗಿದೆ. ವಿವಿಧ ಕೋರ್ಸ್ ತೆಗೆದುಕೊಂಡು ಅಧ್ಯಯನ ಮಾಡುತ್ತಿರುವ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ (SC/ST) ವಿದ್ಯಾರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದಾಗಿದ್ದು, ಇದೇ ಬರುವ 31 ಡಿಸೇಂಬರ್ 2023 ರ ಒಳಗೆ ಅರ್ಜಿಯನ್ನು ಸಲ್ಲಿಸುವಂತೆ ಕೇಳಿಕೊಂಡಿದೆ.

ಮೆಟ್ರಿಕ್ ನಂತರದ ಶಿಕ್ಷಣವನ್ನು ಪಡೆದುಕೊಳ್ಳುತ್ತಿರುವ ಹಾಗೂ ಪ್ರಥಮ ದರ್ಜೆಯಲ್ಲಿ ಉತ್ತೀರ್ಣರಾದ SC/ST ಸಮುದಾಯದ ವಿದ್ಯಾರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಕೆಗೆ 31 ಡಿಸೇಂಬರ್ 2023 ಕೊನೆಯ ದಿನವಾಗಿದ್ದು, ಈ ಮೂಲಕ ಸಹಾಯಧನವನ್ನು ಪಡೆದು ಶಿಕ್ಷಣವನ್ನು ಮುಂದುವರೆಸಬಹುದಾಗಿದೆ.

ವಿದ್ಯಾರ್ಥಿ ವೇತನ, ಉದ್ಯೋಗ ಸುದ್ದಿ ಸೇರಿದಂತೆ ಇತರ ಮಾಹಿತಿಗಾಗಿ ನಮ್ಮ ವಾಟ್ಸಾಪ್ ಮತ್ತು ಟೆಲಿಗ್ರಾಂ ಚಾನಲ್ ಸೇರಿಕೊಳ್ಳಿ. ಈ ಸ್ಕಾಲರ್‌ಶಿಪ್‌ ಕುರಿತಂತೆ ಸಂಪೂರ್ಣ ಮಾಹಿತಿಗಳನ್ನು ಕೆಳಗೆ ನೀಡಲಾಗಿದ್ದು, ಕೊನೆಯವರೆಗೆ ಓದಿರಿ. ಸಂಪೂರ್ಣ ಮಾಹಿತಿಯನ್ನು ತಿಳಿದುಕೊಂಡು ಅರ್ಜಿಯನ್ನು ಸಲ್ಲಿಸಬೇಕಾಗಿ ವಿನಂತಿ.

ಇದನ್ನೂ ಓದಿ: India Post Recruitment 2023: ಅಂಚೆ ಇಲಾಖೆಯಲ್ಲಿ ನೇರ ನೇಮಕಾತಿ

Social Welfare Department Scholarship ಮೊತ್ತವೆಷ್ಟು ಗೊತ್ತೇ ?

  • ದ್ವಿತೀಯ ಪಿಯುಸಿ ಮತ್ತು ಮೂರು ವರ್ಷದ ಪಾಲಿಟೆಕ್ನಿಕ್‌ ಡಿಪ್ಲೊಮ ವಿದ್ಯಾರ್ಥಿಗಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ರೂ. 20,000/-
  • ಪದವಿ ವಿದ್ಯಾರ್ಥಿಗಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ರೂ. 25,000/-
  • ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ರೂ. 30,000/-
  • ಅಗ್ರಿಕಲ್ಚರ್‌, ಇಂಜಿನಿಯರ್, ವೆಟರನರಿ, ಮೆಡಿಷನ್ ವಿದ್ಯಾರ್ಥಿಗಳಿಗೆ ವಾರ್ಷಿಕ ವಿದ್ಯಾರ್ಥಿ ವೇತನ ರೂ. 35,000/-

ಅರ್ಜಿ ಸಲ್ಲಿಸಲು ಬೇಕಾದ ದಾಖಲೆ ಮಾಹಿತಿಗಳು

Social Welfare Department Scholarship ಗೆ ಅರ್ಜಿಯನ್ನು ಸಲ್ಲಿಸಲು ಈ ಕೆಳಗೆ ತಿಳಿಸಲಾಗಿರುವ ದಾಖಲೆಗಳನ್ನು ಸ್ಕಾನ್ ಮಾಡಿಟ್ಟುಕೊಳ್ಳಿ.

  • ಪಾಸ್‌ಪೋರ್ಟ್‌ ಅಳತೆಯ ಭಾವಚಿತ್ರ
  • ಅರ್ಜಿ ಸಲ್ಲಿಸುವವರ ಹಿಂದಿನ ಶೈಕ್ಷಣಿಕ ಅರ್ಹತೆಯ ಅಂಕಪಟ್ಟಿ
  • ಆಧಾರ್‌ ಕಾರ್ಡ್‌ ಅಥವಾ ಸರ್ಕಾರಿ ಗುರುತಿನ ಚೀಟಿ
  • ಆದಾಯ ಪ್ರಮಾಣ ಪತ್ರ
  • ಜಾತಿ ಪ್ರಮಾಣ ಪತ್ರ
  • ಆಧಾರ್ ಕಾರ್ಡ್ ಪ್ರತಿ
  • ಬ್ಯಾಂಕ್‌ ಪಾಸ್‌ ಬುಕ್ ಪ್ರತಿ
  • ಪ್ರಸ್ತುತ ಶಿಕ್ಷಣಕ್ಕೆ ಪ್ರವೇಶ ಪಡೆದಿರುವ ಕುರಿತು ಪೂರಕ ದಾಖಲೆ

ಅರ್ಜಿ ಸಲ್ಲಿಸುವುದು ಹೇಗೆ?

  • ಸಮಾಜ ಕಲ್ಯಾಣ ಇಲಾಖೆಯ ಅಧಿಕೃತ ಜಾಲತಾಣಕ್ಕೆ ಭೇಟಿ ನೀಡಿ. (ಅಧಿಕೃತ ವೆಬ್ ಸೈಟ್ ಲಿಂಕ್ ಕೊನೆಯಲ್ಲಿ ನೀಡಲಾಗಿದೆ)
  • ಮೆಟ್ರಿಕ್ ನಂತರ (ಪದವಿ/ಸ್ನಾತಕೋತ್ತರ ಪದವಿ) ಪ್ರೋತ್ಸಾಹಧನ (Social Welfare Department Scholarship) ಲಿಂಕನ್ನು ಕ್ಲಿಕ್ ಮಾಡಿ.
  • ಈಗ ಇಲ್ಲಿ ಆನ್ ಲೈನ್ ಅಪ್ಲಿಕೇಶನ್ ಲಿಂಕ್ ಕ್ಲಿಕ್ ಮಾಡಿ.
  • ಅರ್ಜಿ ನಮೂನೆಯಲ್ಲಿ ಕೇಳಲಾದ ವಿವರಗಳನ್ನು ನಮೂದಿಸಿ.
  • ಮೇಲೆ ತಿಳಿಸಿದ ದಾಖಲೆಗಳನ್ನು ಸ್ಕಾನ್ ಮಾಡಿ ಸಲ್ಲಿಸಿ.
  • ನಂತರ ಸಲ್ಲಿಸು (submit) ಮೇಲೆ ಕ್ಲಿಕ್ ಮಾಡಿ.

ಇಲ್ಲಿ ಕ್ಲಿಕ್ ಮಾಡಿ: Intelligence Bureau Recruitment 2023: ವಿವಿಧ 677 ಹುದ್ದೆಗಳಿಗೆ ಈ ಕೂಡಲೇ ಅರ್ಜಿ ಹಾಕಿ

ಪ್ರಮುಖ ಲಿಂಕುಗಳು

ಸಮಾಜ ಕಲ್ಯಾಣ ಇಲಾಖೆಯ ವೆಬ್ ಸೈಟ್ ಇಲ್ಲಿ ಕ್ಲಿಕ್ ಮಾಡಿ
ವಿದ್ಯಾರ್ಥಿ ವೇತನಕ್ಕೆ ಅರ್ಜಿ ಸಲ್ಲಿಸಿ ಇಲ್ಲಿ ಕ್ಲಿಕ್ ಮಾಡಿ
ವಾಟ್ಸಪ್ ಚಾನಲ್ ಇಲ್ಲಿ ಕ್ಲಿಕ್ ಮಾಡಿ
ಟೆಲಿಗ್ರಾಮ್ ಚಾನಲ್ ಇಲ್ಲಿ ಕ್ಲಿಕ್ ಮಾಡಿ
Sharing Is Caring: