SSC Recruitment 2022: PUC ಪಾಸಾದವರಿಗೆ ಇಲ್ಲಿದೆ ಬಂಪರ್ ಕೇಂದ್ರ ಸರ್ಕಾರಿ ಉದ್ಯೋಗ

ಸಿಬ್ಬಂದಿ ನೇಮಕಾತಿ ಆಯೋಗವು ಖಾಲಿಯಿರುವ ಹುದ್ದೆಗಳ (SSC Recruitment 2022) ಭರ್ತಿಗೆ ಅರ್ಜಿಯನ್ನು ಕರೆದಿದ್ದು, ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು. ಕೇಂದ್ರ ಸರಕಾರಿ ಉದ್ಯೋಗ ಹುಡುಕುತ್ತಿರುವ ಮತ್ತು ಅಂಚೆ ಕಚೇರಿ & ಡೇಟಾ ಎಂಟ್ರಿ ಸಹಾಯಕ ಹುದ್ದೆಗಳಲ್ಲಿ ಆಸಕ್ತಿಯನ್ನು ಹೊಂದಿರುವವರು ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹದು.

ಮಾನ್ಯತೆ ಪಡೆದ ಮಂಡಳಿ ಅಥವಾ ವಿಶ್ವವಿದ್ಯಾಲಯದಿಂದ ಕಡ್ಡಾಯವಾಗಿ ಪಿಯುಸಿ ಉತೀರ್ಣರಾಗಿರಬೇಕು. ಅರ್ಜಿಯನ್ನು ಸಲ್ಲಿಸಲು ಜನವರಿ 04, 2023 ಕೊನೆಯ ದಿನವಾಗಿದೆ.

ಅರ್ಜಿಯನ್ನು ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಕೆಳಗೆ ನೀಡಿರುವ ವಿದ್ಯಾರ್ಹತೆ, ವಯೋಮಿತಿ, ಆಯ್ಕೆ ಪ್ರಕ್ರಿಯೆ, ಅರ್ಜಿ ಶುಲ್ಕ ಹಾಗೂ ಇನ್ನಿತರ ಮಹತ್ವದ ಮಾಹಿತಿಗಳನ್ನು ಸರಿಯಾಗಿ ಓದಿಕೊಂಡು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಮುಂದೆ ಉದ್ಯೋಗಕ್ಕೆ ಸಂಬಂಧಿಸಿದ ಅಧಿಕೃತ ನೋಟಿಫಿಕೇಶನ್ ಸಹ ಒದಗಿಸಲಾಗಿದ್ದು, ಸರಿಯಾಗಿ ಮತ್ತೊಮ್ಮೆ ಓದಿಕೊಂಡು ಅರ್ಜಿಯನ್ನು ಸಲ್ಲಿಸಲು ಕೋರಲಾಗಿದೆ.

ಉದ್ಯೋಗ ಸಂಸ್ಥೆಸಿಬ್ಬಂದಿ ನೇಮಕಾತಿ ಆಯೋಗ
ಹುದ್ದೆಯ ಹೆಸರುಅಂಚೆ ಕಚೇರಿ ಮತ್ತು ಡೇಟಾ ಎಂಟ್ರಿ ಸಹಾಯಕ
ಖಾಲಿಯಿರುವ ಒಟ್ಟು ಹುದ್ದೆಗಳು4500
ವಿದ್ಯಾರ್ಹತೆಪಿಯುಸಿ
ಮಾಸಿಕ ವೇತನರೂ. 29,200 ರಿಂದ ರೂ. 92,300

ವಿದ್ಯಾರ್ಹತೆ

SSC Recruitment 2022 ರ ಅಧಿಕೃತ ಅಧಿಸೂಚನೆಯ ಪ್ರಕಾರ, ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಯಾವುದೇ ಮಾನ್ಯತೆ ಪಡೆದ ವಿಶ್ವವಿದ್ಯಾಲಯ ಅಥವಾ ಮಂಡಳಿಯಿಂದ ಪಿಯುಸಿ ಉತ್ತೀರ್ಣರಾಗಿರುವುದು ಅವಶ್ಯವಾಗಿದೆ.

ಇದನ್ನೂ ಓದಿರಿ: Karnataka Bank Recruitment: ಕರ್ಣಾಟಕ ಬ್ಯಾಂಕ್ ನಲ್ಲಿ ಹುದ್ದೆಗಳ ಬೃಹತ್ ನೇಮಕಾತಿ

ವಯೋಮಿತಿ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಆಸಕ್ತ ಅಭ್ಯರ್ಥಿಗಳು, ಸಾಮಾನ್ಯ ವರ್ಗದವರಗೆ ಕನಿಷ್ಠ 18 ವರ್ಷಗಳು ಮತ್ತು ಗರಿಷ್ಠ 27 ವರ್ಷಗಳು ಆಗಿರಬೇಕು. ಇನ್ನು ಒಬಿಸಿ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 30 ವರ್ಷಗಳು, ಎಸ್ಸಿ, ಎಸ್ಟಿ ಅಭ್ಯರ್ಥಿಗಳು ಕನಿಷ್ಠ 18 ಮತ್ತು ಗರಿಷ್ಠ 32 ಒಳಗಿರಬೇಕು.

ಅರ್ಜಿ ಶುಲ್ಕ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ ಖಾಲಿಯಿರುವ ಹುದ್ದೆಗಳಿಗೆ ಅರ್ಜಿಯನ್ನು ಸಲ್ಲಿಸಲು ಅರ್ಜಿ ಶುಲ್ಕ ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳಿಗೆ 100 ರೂಪಾಯಿಗಳು. ಎಸ್ಸಿ ಮತ್ತು ಎಸ್ಟಿ ಅಭ್ಯರ್ಥಿಗಳಿಗೆ ಶುಲ್ಕ ವಿನಾಯಿತಿ ಘೋಷಿಸಲಾಗಿದೆ.

ಇದನ್ನೂ ಓದಿರಿ: Indian Post Office Recruitment 2023: ಅಂಚೆ ಇಲಾಖೆಯಲ್ಲಿ ಖಾಲಿಯಿರುವ 7 ಹುದ್ದೆಗಳ ಭರ್ತಿಗೆ ಅರ್ಜಿ ಅಹ್ವಾನ

ವೇತನ

ಸಿಬ್ಬಂದಿ ನೇಮಕಾತಿ ಆಯೋಗದಲ್ಲಿ (Staff Selection Commission) ಖಾಲಿಯಿರುವ ಹುದ್ದೆಗಳಿಗೆ ಆಯ್ಕೆಯಾಗುವ ಅಭ್ಯರ್ಥಿಗಳಿಗೆ ಮಾಸಿಕ 29,200/- ರೂಪಾಯಿಯಿಂದ 92,300/- ರೂಪಾಯಿಗಳನ್ನು ನೀಡಲಾಗುತ್ತದೆ.

ಪ್ರಮುಖ ದಿನಾಂಕಗಳು

ಅರ್ಜಿ ಸಲ್ಲಿಸಲು ಕೊನೆಯ ದಿನ: 04 ಜನವರಿ 2023

ಪರೀಕ್ಷೆ ನಡೆಯುವ ತಿಂಗಳು: ಮಾರ್ಚ್​ 2023

ಪ್ರಮುಖ ಲಿಂಕುಗಳು

ಅಧಿಕೃತ ವೆಬ್ ಸೈಟ್: ಕ್ಲಿಕ್ ಮಾಡಿ

Sharing Is Caring: