ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (Unique Identification Authority of India) ದಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಯ್ಕೆಯಾದ ಅಭ್ಯರ್ಥಿಗಳನ್ನು ಬೆಂಗಳೂರಿನಲ್ಲಿ ನೇಮಕ ಮಾಡುವುದಾಗಿ ಅಧಿಸೂಚನೆಯಲ್ಲಿ ತಿಳಿಸಲಾಗಿದೆ. ಬೆಂಗಳೂರಿನಲ್ಲಿ ಕೆಲಸ ಮಾಡುವ ಆಸಕ್ತಿಯನ್ನು ಹೊಂದಿರುವ ಅರ್ಹ ಅಭ್ಯರ್ಥಿಗಳು ಈ ಕೂಡಲೇ ಅರ್ಜಿಯನ್ನು ಸಲ್ಲಿಸಿ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದಲ್ಲಿ 4 ಹುದ್ದೆಗಳು ಖಾಲಿಯಿದ್ದು, ಅಧಿಸೂಚನೆಯನ್ನು ಹೊರಡಿಸಲಾಗಿದೆ. ಹುದ್ದೆಗಳಿಗೆ ಅರ್ಜಿಸಲ್ಲಿಸಲು ಜುಲೈ 11, 2023 ಕೊನೆಯ ದಿನವಾಗಿರಲಿದೆ ಎಂದು ತಿಳಿಸಲಾಗಿದೆ.
UIDAI ನಲ್ಲಿ ಸೆಕ್ಷನ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ ಹುದ್ದೆಗಳು ಸೇರಿದಂತೆ ಹಲವು ಹುದ್ದೆಗಳು ಖಾಲಿಯಿದ್ದು, ಈ ಕೂಡಲೇ ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಈ ಉದ್ಯೋಗಕ್ಕೆ ಸಂಬಂಧಿಸಿದಂತೆ ವಿದ್ಯಾರ್ಹತೆ, ಸಂಬಳ, ವಯೋಮಿತಿ, ಅರ್ಜಿ ಶುಲ್ಕ, ಆಯ್ಕೆ ಪ್ರಕ್ರಿಯೆ ಮುಂತಾದ ಮಾಹಿತಿಗಳನ್ನು ತಿಳಿದುಕೊಳ್ಳಲು ಮುಂದೆ ಓದಿ.
ಉದ್ಯೋಗ ನೀಡುವ ಸಂಸ್ಥೆ | ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ |
ಖಾಲಿಯಿರುವ ಒಟ್ಟು ಹುದ್ದೆಗಳು | 4 |
ಖಾಲಿಯಿರುವ ಹುದ್ದೆಗಳು | ಸೆಕ್ಷನ್ ಆಫೀಸರ್, ಡೆಪ್ಯುಟಿ ಡೈರೆಕ್ಟರ್ |
ಉದ್ಯೋಗ ಸ್ಥಳ | ಬೆಂಗಳೂರು |
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ | 11 ಜುಲೈ 2023 |
ಲಭ್ಯವಿರುವ ಹುದ್ದೆಯ ಮಾಹಿತಿ
- ಡೆಪ್ಯುಟಿ ಡೈರೆಕ್ಟರ್-1
- ಅಸಿಸ್ಟೆಂಟ್ ಅಕೌಂಟ್ ಆಫೀಸರ್-1
- ಸೆಕ್ಷನ್ ಆಫೀಸರ್-1
- ಅಸಿಸ್ಟೆಂಟ್ ಸೆಕ್ಷನ್ ಆಫೀಸರ್- 1
ವಿದ್ಯಾರ್ಹತೆ
ಅಸಿಸ್ಟೆಂಟ್ ಅಕೌಂಟ್ ಆಫೀಸರ್ ಹುದ್ದೆಗೆ ಚಾರ್ಟರ್ಡ್ ಅಕೌಂಟೆಂಟ್, ಕಾಸ್ಟ್ ಅಕೌಂಟೆಂಟ್, ಎಂಬಿಎ ಮಾಡಿರಬೇಕು. ಇನ್ನುಳಿದಂತೆ ಡೆಪ್ಯುಟಿ ಡೈರೆಕ್ಟರ್, ಸೆಕ್ಷನ್ ಆಫೀಸರ್, ಅಸಿಸ್ಟೆಂಟ್ ಸೆಕ್ಷನ್ ಆಫೀಸರ್ ಹುದ್ದೆಗಳಿಗೆ ಅಗತ್ಯವಿರುವ ವಿದ್ಯಾರ್ಹತೆಗಳ ಮಾಹಿತಿಗೆ ಅಧಿಸೂಚನೆಯನ್ನು ಪರಿಶೀಲಿಸಿ.
ಇದನ್ನೂ ಓದಿರಿ: KAPL Recruitment 2023: ಜೂನಿಯರ್ ಎಕ್ಸಿಕ್ಯೂಟಿವ್, ಕ್ವಾಲಿಟಿ ಅಶ್ಯೂರೆನ್ಸ್ ಹುದ್ದೆಗಳು ಖಾಲಿಯಿವೆ
ವಯೋಮಿತಿ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ ನೇಮಕಾತಿ ಅಧಿಸೂಚನೆ ಪ್ರಕಾರ, ಜುಲೈ 11, 2023ಕ್ಕೆ ಗರಿಷ್ಠ 56 ವರ್ಷ ಮೀರಿರಬಾರದು. ಮೀಸಲಾತಿ ಅನುಸಾರ ಅಭ್ಯರ್ಥಿಗಳಿಗೆ ವಯೋಮಿತಿ ಸಡಿಲಿಕೆ ನೀಡಲಾಗುತ್ತದೆ.
ಆಯ್ಕೆ ಪ್ರಕ್ರಿಯೆ
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರದ (UIDAI Recruitment 2023) ಹುದ್ದೆಗಳಿಗೆ ಆಯ್ಕೆ ಮಾಡುವಾಗ ಲಿಖಿತ ಪರೀಕ್ಷೆಯನ್ನು ನಡೆಸಲಾಗುತ್ತದೆ. ಇಲ್ಲಿ ಆಯ್ಕೆಯಾದ ಅಭ್ಯರ್ಥಿಗಳನ್ನು ನೇರ ಸಂದರ್ಶನ ನಡೆಸುವ ಮೂಲಕ ಆಯ್ಕೆಯಾಗುತ್ತದೆ ಎಂದು ಮಾಹಿತಿ ನೀಡಲಾಗಿದೆ.
ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ(UIDAI Recruitment 2023) ರಲ್ಲಿ ಖಾಲಿಯಿರುವ ಹುದ್ದೆಗಳ ಭರ್ತಿಗೆ ಅರ್ಜಿ ಸಲ್ಲಿಸುವುದು ಹೇಗೆ ?
- UIDAI Recruitment 2023 ರ ಅಧಿಸೂಚನೆಯನ್ನು ಸಂಪೂರ್ಣವಾಗಿ ಓದಿರಿ. ಹುದ್ದೆಗೆ ಅರ್ಜಿ ಸಲ್ಲಿಸಲು ನೀಡಲಾದ ಮಾನದಂಡಗಳು ನೀವು ಹೊಂದಿರುವಿರೆ ಎಂದು ಪರಿಶೀಲಿಸಿಕೊಳ್ಳಿ.
- ನಂತರ ಅಲ್ಲಿ ಕೇಳಲಾದ ಸ್ವವಿವರ, ಇಮೇಲ್ ಐಡಿ ಮತ್ತು ಮೊಬೈಲ್ ಸಂಖ್ಯೆ, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸ್ಯೂಮ್, ಯಾವುದೇ ಕೆಲಸದ ಅನುಭವವಿದ್ದರೆ ದಾಖಲೆಗಳು ಮತ್ತು ಇತರ ಅಗತ್ಯ ದಾಖಲಾತಿಗಳನ್ನು ಸಿದ್ಧಪಡಿಸಿಕೊಳ್ಳಿ.
- ನಂತರ ಅರ್ಜಿ ನಮೂನೆಯನ್ನು ಸರಿಯಾಗಿ ಭರ್ತಿ ಮಾಡಿ. ಅಲ್ಲದೇ ಮತ್ತೊಮ್ಮೆ ನೀವು ನೀಡಿರುವ ಮಾಹಿತಿಗಳು ಸರಿಯಾಗಿವೆಯೇ ಎಂದು ಪರಿಶೀಲಿಸಿಕೊಳ್ಳಿ.
- ಅರ್ಜಿ ನಮೂನೆಯನ್ನು ಮತ್ತು ಅಗತ್ಯ ದಾಖಲಾತಿಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಕಳುಹಿಸಬೇಕು.
- ನಿರ್ದೇಶಕರು (HR) ಭಾರತೀಯ ವಿಶಿಷ್ಟ ಗುರುತಿನ ಪ್ರಾಧಿಕಾರ (UIDAI) ಆಧಾರ್ ಕಾಂಪ್ಲೆಕ್ಸ್ NTI ಲೇಔಟ್ ಟಾಟಾ ನಗರ ಕೊಡಿಗೇಹಳ್ಳಿ ತಂತ್ರಜ್ಞಾನ ಕೇಂದ್ರ ಬೆಂಗಳೂರು-560092
ಪ್ರಮುಖ ದಿನಾಂಕಗಳು
ಅರ್ಜಿ ಸಲ್ಲಿಕೆ ಆರಂಭ ದಿನಾಂಕ: ಮೇ 12, 2023
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: ಜುಲೈ 11, 2023
ಪ್ರಮುಖ ಲಿಂಕುಗಳು
ಅಧಿಕೃತ ವೆಬ್ ಸೈಟ್: uidai.gov.in
UIDAI Recruitment 2023 ರ ಅಧಿಸೂಚನೆ ಓದಲು ಕ್ಲಿಕ್ ಮಾಡಿ